ಕೆಆರ್ ಐಡಿಎಲ್ ಹಗರಣ ಕುರಿತು ತನಿಖೆ ನಡೆಸಲು ಸರ್ಕಾರ ಬದ್ಧ: ಕಾಂಗ್ರೆಸ್

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ-ಕೆಆರ್ ಐಡಿಎಲ್ ನ ಹಗರಣ ಕುರಿತು ತನಿಖೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಬಿಬಿಎಂಪಿ ಕಚೇರಿ
ಬಿಬಿಎಂಪಿ ಕಚೇರಿ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ-ಕೆಆರ್ ಐಡಿಎಲ್ ನ ಹಗರಣ ಕುರಿತು ತನಿಖೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಕಳೆದ ಆರು ವರ್ಷಗಳ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಆರ್ ಐಡಿಎಲ್ ನಲ್ಲಿ ನಡೆದಿರುವ ಕಾಮಗಾರಿಗಳ ಅಕ್ರಮ ಕುರಿತು ಸಿಐಡಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್. ಆರ್ . ರಮೇಶ್  ಪತ್ರ ಬರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಕೆಆರ್ ಐಡಿಎಲ್ ನಲ್ಲಿ ಬಿಜೆಪಿ ಅವಧಿಯಲ್ಲಿ ಭಾರಿ ಹಗರಣ ನಡೆದಿದೆ ಎಂದು ಬಿಜೆಪಿಯವರೇ ಆರೋಪಿಸಿದ್ದಾರೆ. ರಮೇಶ್ ಅವರ ಈ ದೂರಿನ ಬಗ್ಗೆ ಮಾತನಾಡುವ ದಮ್ಮು ತಾಕತ್ತು ರಾಜ್ಯ ಬಿಜೆಪಿಗೆ ಇದೆಯೇ ಎಂದು ಪ್ರಶ್ನಿಸಿದೆ.

ಈ ದೂರಿನ ಕುರಿತು ತನಿಖೆಗೆ ವಹಿಸಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳಷ್ಟೇ ಅಲ್ಲ. ಶಮೀಲಾಗಿರುವ ಬಿಜೆಪಿ ನಾಯಕರು ಮುದ್ದೆಯೂಟಕ್ಕೆ ರೆಡಿಯಾಗಿರಲಿ ಎಂದು ಎಚ್ಚರಿಕೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com