'ಗೃಹ ಜ್ಯೋತಿ'ಗೆ ಡೆಡ್ ಲೈನ್ ಇಲ್ಲ, ಆದರೆ ಮುಂದಿನ ತಿಂಗಳು ಫ್ರೀ ಸಿಗಲು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು: ಕೆ ಜೆ ಜಾರ್ಜ್
200 ಯೂನಿಟ್ ಒಳಗೆ ವಿದ್ಯುತ್ ಬಳಸುವ ರಾಜ್ಯದ ಎಲ್ಲಾ ನಾಗರಿಕರಿಗೂ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರಕಲಿದ್ದು ನಾಗರಿಕರು ಆದಷ್ಟು ಶೀಘ್ರ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.

ಚಿಕ್ಕಮಗಳೂರು: 200 ಯೂನಿಟ್ ಒಳಗೆ ವಿದ್ಯುತ್ ಬಳಸುವ ರಾಜ್ಯದ ಎಲ್ಲಾ ನಾಗರಿಕರಿಗೂ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರಕಲಿದ್ದು ನಾಗರಿಕರು ಆದಷ್ಟು ಶೀಘ್ರ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್(K J George) ತಿಳಿಸಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೃಹ ಜ್ಯೋತಿಗೆ(Gruha Jyothi) ಅರ್ಜಿ ಸಲ್ಲಿಸಲು ಡೆಡ್ ಲೈನ್ ಇಲ್ಲ, ಆದರೆ ಈ ತಿಂಗಳು ಉಚಿತ ವಿದ್ಯುತ್ ಸಿಗಬೇಕೆಂದರೆ ಜುಲೈ 25ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದರೆ ಆಗಸ್ಟ್ ತಿಂಗಳ ಬಿಲ್ ನಲ್ಲಿ ಶೂನ್ಯ ಬಿಲ್ ಎಂದು ಬರುತ್ತದೆ. ಇಲ್ಲದಿದ್ದರೆ ನಾಗರಿಕರು ಹಣ ಪಾವತಿ ಮಾಡಬೇಕಾಗುತ್ತದೆ ಎಂದರು.
86.5 ಲಕ್ಷ ಜನರಿಂದ ಅರ್ಜಿ: ಗೃಹ ಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತದೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್ ಜಾರಿಯಾಗಲಿದೆ. ಗೃಹಜ್ಯೋತಿಗೆ ಅರ್ಜಿ ಹಾಕದವರಿಗೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಒಳ್ಳೆಯದು.
ಅರ್ಜಿ ಹಾಕಲು ದಿನಾಂಕದ ಗಡುವು ಇಲ್ಲ. ಆದರೆ ಸರ್ಕಾರದಿಂದ ಉಚಿತ ಸಿಗಬೇಕೆಂದರೆ ನಾಗರಿಕರು ಅರ್ಜಿ ಹಾಕಲೇಬೇಕು. ಆದಷ್ಟು ಬೇಗನೆ ಅರ್ಜಿ ಹಾಕಿದರೆ ಜನರಿಗೇ ಲಾಭ, ಇಲ್ಲದಿದ್ದರೆ ವಿದ್ಯುತ್ ಶುಲ್ಕ ಕಟ್ಟಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


