ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪಾವತಿಸಬೇಡಿ: ಜನತೆಗೆ ಸಚಿವ ಚೆಲುವರಾಯಸ್ವಾಮಿ ಕರೆ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಗೆ ಎರಡನೇ ಟೋಲ್ ಪಾವತಿಸದಂತೆ ಜನತೆಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕರೆ ನೀಡಿದ್ದಾರೆ.
ಟಿಕೆ ಲೇಔಟ್‌ನಲ್ಲಿರುವ ಒಕ್ಕಲಿಗರ ಹಾಸ್ಟೆಲ್‌ಗೆ ಶನಿವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಗೆ ಎರಡನೇ ಟೋಲ್ ವಿರುದ್ಧದ ಪ್ರತಿಭಟನೆಗೆ ನನ್ನ ಬೆಂಬಲವಿದೆ. ಆದರೆ, ನೇರವಾಗಿ ಪ್ರತಿಭಟಿಸುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಈ ಸಂಬಂಧ ನಮ್ಮ ಶಾಸಕರು ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿದರು.
ಎಕ್ಸ್‌ಪ್ರೆಸ್‌ವೇಯಲ್ಲಿ ಟೋಲ್ ಸಂಗ್ರಹದ ಕುರಿತು ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ. ರಾಜ್ಯಗಳು ಸಂಗ್ರಹಿಸುವ ತೆರಿಗೆ ಮೊತ್ತದಿಂದ ಕೇಂದ್ರವು ಯೋಜನೆಗಳನ್ನು ಕೈಗೊಳ್ಳುತ್ತದೆ. ಹೀಗಾಗಿ ಎಕ್ಸ್‌ಪ್ರೆಸ್‌ವೇಗೆ ಟೋಲ್ ಪಾವತಿಸದಂತೆ ನಾನು ಜನರಿಗೆ ಕರೆ ನೀಡುತ್ತಿದ್ದೇನೆಂದು ತಿಳಿಸಿದರು.
ಟೋಲ್ ಸಂಗ್ರಹಣೆಯಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ, ಆದರೆ ಯೋಜನೆಯನ್ನು ಪೂರ್ಣಗೊಳಿಸಿದ ನಂತರವೇ ಟೋಲ್ ಸಂಗ್ರಹವನ್ನು ಮಾಡಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ