ಹಾಸನದ ಶಾಂತಿಗ್ರಾಮ- ಹಿರಿಯೂರು ನಡುವೆ ಹೊಸ ರಾಷ್ಟ್ರೀಯ ಹೆದ್ದಾರಿ; ಹೆಚ್ಚಿನ ಪರಿಹಾರಕ್ಕೆ ರೈತರ ಒತ್ತಾಯ

ಭಾರತಮಾಲಾ ಯೋಜನೆ ಅಡಿಯಲ್ಲಿ ಹಾಸನದ ಶಾಂತಿಗ್ರಾಮದಿಂದ ಹಿರಿಯೂರುವರೆಗೆ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದ್ದು, ಇದು ಹುಳಿಯಾರು – ಹಿರಿಯೂರು- ಚಿತ್ರದುರ್ಗ-ರಾಯಚೂರು ಮೂಲಕ ಆಂಧ್ರಪ್ರದೇಶದ...
ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ
ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ
Updated on

ಹಾಸನ: ಭಾರತಮಾಲಾ ಯೋಜನೆ ಅಡಿಯಲ್ಲಿ ಹಾಸನದ ಶಾಂತಿಗ್ರಾಮದಿಂದ ಹಿರಿಯೂರುವರೆಗೆ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದ್ದು, ಇದು ಹುಳಿಯಾರು– ಹಿರಿಯೂರು- ಚಿತ್ರದುರ್ಗ-ರಾಯಚೂರು ಮೂಲಕ ಆಂಧ್ರಪ್ರದೇಶದ ವಿಶಾಕಪಟ್ಟಣಂಗೆ ಸಂಪರ್ಕ ಕಲ್ಪಿಸುತ್ತದೆ.

ಈ ಹೆದ್ದಾರಿ ಯೋಜನೆಯನ್ನು 2017 ರಲ್ಲಿ ಪ್ರಸ್ತಾಪಿಸಲಾಗಿದ್ದು, 2023 ರಲ್ಲಿ ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ. ಈ ಹೊಸ ರಾಷ್ಟ್ರೀಯ ಹೆದ್ದಾರಿಯು ವಿಶಾಕಪಟ್ಟಣಂ ಮತ್ತು ಮಂಗಳೂರಿನ ಬಂದರುಗಳನ್ನು ಸಂಪರ್ಕಿಸುತ್ತದೆ.

ಯೋಜನಾ ನಿರ್ದೇಶಕರಾದ ಹಂಸಾರಿಯಾ ಅವರ ಪ್ರಕಾರ, 114 ಕಿಮೀ ಅಭಿವೃದ್ಧಿಗೆ 250 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದ್ದು, ಶೇ. 90 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಮುಗಿದ ನಂತರ ಕೆಲಸ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು  ಎಂದು ಅವರು ಹೇಳಿದ್ದಾರೆ.

ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರು ಇಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ, ತಮಗೆ ಹೆಚ್ಚಿನ ಪರಿಹಾರ ದೊರಕಿಸಿಕೊಡಬೇಕು. ಇದರಲ್ಲಿ ಯಾವುದೇ ತಾರತಮ್ಯವಾಗಬಹುದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರು, ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ಯೋಜನೆಯ ಮಾದರಿಯಲ್ಲಿ ಉತ್ತಮ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು. 

ಯಾವುದೇ ಕಾರಣಕ್ಕೂ ಜಿಲ್ಲೆಯ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಎಲ್ಲಾ ರೈತರಿಗೂ ಕೂಡ ಹೆಚ್ಚಿನ ಬೆಲೆಯಲ್ಲಿ ಪರಿಹಾರ ನಿಗದಿಪಡಿಸಲಾಗುವುದು. ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುವುದು ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಮತ್ತೆ ಹಾಸನದಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ವಿಶ್ವಾಸ ವ್ಯಕ್ತಪಡಿಸಿದ ಪ್ರಜ್ವಲ್
2024ರ ಲೋಕಸಭೆ ಚುನಾವಣೆಗೆ ಹಾಸನ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಸ್ಪರ್ಧಿಸುವ ವಿಶ್ವಾಸ ವ್ಯಕ್ತಪಡಿಸಿರುವ ಪ್ರಜ್ವಲ್ ರೇವಣ್ಣ ಅವರು, ತಮ್ಮ ಅಜ್ಜ ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡ ಅವರು ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹಾಸನದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅವರು ಹಾಸನದ ಜನರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com