ಮುಂಗಾರು ಮಳೆ ಎದುರಿಸಲು ಕೊಡಗು ಸಜ್ಜು, ಎನ್‌ಡಿಆರ್‌ಎಫ್ ತಂಡ ನಿಯೋಜನೆ

ಮುಂದಿನ ದಿನಗಳಲ್ಲಿ ಕೊಡಗಿನಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮಳೆ ಸಂಬಂಧಿತ ಹಾನಿಗಳನ್ನು ತಡೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಎನ್‌ಡಿಆರ್‌ಎಫ್ ತಂಡ
ಎನ್‌ಡಿಆರ್‌ಎಫ್ ತಂಡ

ಮಡಿಕೇರಿ: ಮುಂದಿನ ದಿನಗಳಲ್ಲಿ ಕೊಡಗಿನಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮಳೆ ಸಂಬಂಧಿತ ಹಾನಿಗಳನ್ನು ತಡೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಮಾನ್ಸೂನ್‌ಗೆ ಸಂಬಂಧಿಸಿದ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಪಂಚಾಯತ್‌ಗಳಿಗೆ ವಿಶೇಷ ಹಣವನ್ನು ಬಿಡುಗಡೆ ಮಾಡಲಾಗಿದ್ದರೂ ಹಲವಾರು ಪ್ರದೇಶಗಳನ್ನು ಸೂಕ್ಷ್ಮ ಮತ್ತು ದುರ್ಬಲ ಮಾನ್ಸೂನ್ ವಲಯಗಳಾಗಿ ಗುರುತಿಸಲಾಗಿದೆ.

2018ರ ಮಳೆಗಾಲದಲ್ಲಿ ಕೊಡಗಿನಾದ್ಯಂತ ಸಂಭವಿಸಿದ ಪ್ರಕೃತಿ ವಿಕೋಪದ ನಂತರ, ಮಳೆ ಸಂಬಂಧಿತ ಹಾನಿಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸುತ್ತಿದೆ. ಜಿಲ್ಲೆಯಲ್ಲಿ ಒಟ್ಟು 44 ಪ್ರದೇಶಗಳನ್ನು ಭೂಕುಸಿತ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಲ್ಲದೆ, ಜಿಲ್ಲೆಯಲ್ಲಿ ಒಟ್ಟು 43 ಪ್ರದೇಶಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಕಳೆದ ಮಳೆಗಾಲದಲ್ಲಿ ಹಾನಿಗೊಳಗಾದ ಪ್ರದೇಶಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ.

ಏತನ್ಮಧ್ಯೆ, ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು 25 ಜನರ ಎನ್‌ಡಿಆರ್‌ಎಫ್ ತಂಡವನ್ನು ಮಡಿಕೇರಿ ಜಿಲ್ಲಾ ಕೇಂದ್ರದಲ್ಲಿ ನಿಯೋಜಿಸಲಾಗಿದೆ. ತಂಡವು ಇತ್ತೀಚೆಗೆ ತಮ್ಮ ಸನ್ನದ್ಧತೆಯನ್ನು ಪ್ರದರ್ಶಿಸಲು ಅಣಕು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿತು.

ಈ ತಂಡದೊಂದಿಗೆ, ಪೊಲೀಸ್, ಗೃಹ ರಕ್ಷಕರು, ಅಗ್ನಿಶಾಮಕ ಇಲಾಖೆ ಮತ್ತು ಅರಣ್ಯ ಇಲಾಖೆಯ ಆರ್‌ಆರ್‌ಟಿ ಸದಸ್ಯರಿಗೆ ಅಗತ್ಯವಿದ್ದಾಗ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ತರಬೇತಿ ನೀಡುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ತಂಡಗಳಿಗೆ ಜಿಲ್ಲಾಡಳಿತದಿಂದ ಅಗತ್ಯ ಉಪಕರಣಗಳನ್ನು ಒದಗಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಗಾಗಲೇ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಅಗತ್ಯವಿದ್ದಾಗ ಪರಿಹಾರ ಕೇಂದ್ರಗಳನ್ನು ತೆರೆಯಲಾಗುವುದು ಮತ್ತು ಅದಕ್ಕಾಗಿ ಸೂಕ್ತ ಶಾಲೆಗಳು ಮತ್ತು ಸಮುದಾಯ ಕೇಂದ್ರಗಳನ್ನು ಗುರುತಿಸುವ ಕಾರ್ಯದಲ್ಲಿ ಪಂಚಾಯಿತಿಗಳು ತೊಡಗಿಸಿಕೊಂಡಿವೆ. ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಪ್ರತಿ ಹೋಬಳಿಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com