ಮಳೆ ಆರ್ಭಟ: ಜುಲೈ5 ರಂದು ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜುಲೈ 5ರಂದು ರಜೆ ಘೋಷಣೆ ಮಾಡಲಾಗಿದೆ.
ಉಡುಪಿಯಲ್ಲಿ ಭಾರಿ ಮಳೆ
ಉಡುಪಿಯಲ್ಲಿ ಭಾರಿ ಮಳೆ

ಉಡುಪಿ: ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜುಲೈ 5ರಂದು ರಜೆ ಘೋಷಣೆ ಮಾಡಲಾಗಿದೆ.

ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಹಾಜರಾತಿ ಕಡ್ಡಾಯಗೊಳಿಸದಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ 4 ಮತ್ತು 5 ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com