ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಲಿಮಿಟ್; ಮೀರಿದರೆ ದುಬಾರಿ ದಂಡ ಕಟ್ಟಬೇಕು!

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್‌ ರೇಡಾರ್‌ ಗನ್‌ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. 
ಸಂಚಾರಿ ಪೊಲೀಸರು
ಸಂಚಾರಿ ಪೊಲೀಸರು

ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್‌ ರೇಡಾರ್‌ ಗನ್‌ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. 

ಎಕ್ಸ್‌ಪ್ರೆಸ್ ವೇನಲ್ಲಿ ಸಂಭವನೀಯ ಅಪಘಾತಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಟ್ರಾಫಿಕ್‌ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈಗಾಗಲೇ ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ ಕನಿಷ್ಠ 80 ಕಿ.ಮೀ ನಿಂದ ಗರಿಷ್ಠ 100 ಕಿ‌.ಮೀ ವೇಗದ ಮಿತಿ ವಿಧಿಸಲಾಗಿದ್ದು, ಆ ಬಗ್ಗೆ ಫಲಕಗಳನ್ನು ಹಾಕಲಾಗಿದೆ. 

120 ಕಿ.ಮೀ ವೇಗದಲ್ಲಿ ವಾಹನಗಳು ಚಲಿಸುವುದರಿಂದ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಗಂಟೆಗೆ 100 ಕಿ.ಮೀ ವೇಗವನ್ನು ಮಿತಿಗೊಳಿಸಲಾಗಿದ್ದು ಶಿಸ್ತಾಗಿ ಪಾಲಿಸಲು, ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ. 

100 ಕಿ.ಮೀ.ಗಿಂತಲೂ ಅಧಿಕ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನಿನ್ನೆ ರಾಮನಗರ ಪೊಲೀಸರು 44 ಪ್ರಕರಣಗಳನ್ನು ದಾಖಲಿಸಿದ್ದರು. ಇನ್ನು ಎಕ್ಸ್ ಪ್ರೆಸ್ ವೇನಲ್ಲಿ ವೇಗದ ಮಿತಿ ಹಾಕಿರುವುದಕ್ಕೆ ಸಂಚಾರಿ ಪೊಲೀಸರ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com