ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗ

ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಜನಾರ್ಧನ ರೆಡ್ಡಿ
ಜನಾರ್ಧನ ರೆಡ್ಡಿ

ಕೊಪ್ಪಳ: ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಜನಾರ್ದನ ರೆಡ್ಡಿ ಸದ್ಯ ಗಂಗಾವತಿ ಕ್ಷೇತ್ರದ ಶಾಸಕರಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಹಾಗೂ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಅವರನ್ನು ಸೋಲಿಸಿದ್ದರು.

ಗಣಿ ಉದ್ಯಮಿ ಜನಾದರ್ನ ರೆಡ್ಡಿ ಅವರು ನಾಮಪತ್ರ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಿಲ್ಲ. ವಾಹನಗಳು ಹಾಗೂ ಆಸ್ತಿ ವಿವರಗಳ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಅನಂತಪುರದ ಗಣಿ ಉದ್ಯಮಿ ಟಪಾಲು ಶ್ಯಾಮ್​ ಪ್ರಸಾದ್ ಎನ್ನುವವರು ಚುನಾವಣಾ ಆಯೋಕ್ಕೆ ದೂರು ನೀಡಿದ್ದರು. 

ಈ ದೂರನ್ನು ಚುನಾವಣಾ ಆಯೋಗ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ಹಿಂದಿನ ಬಿಜೆಪಿ ಸರ್ಕಾರ ಸಮ್ಮತಿ ನೀಡಿತ್ತು.

ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಎಂಬ ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದರು ಮತ್ತು ಗಂಗಾವತಿ ಕ್ಷೇತ್ರದಿಂದ 65,791 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ 57,674 ಮತ್ತು ಬಿಜೆಪಿಯ ಪರಣ್ಣ ಮುನವಳ್ಳಿ 29,918 ಮತಗಳನ್ನು ಪಡೆದಿದ್ದರು. ಈ ಮೂಲಕ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ರೆಡ್ಡಿಗೆ ಈ ಬೆಳವಣಿಗೆ ಹಿನ್ನಡೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com