ಕೆಎಸ್‌ಆರ್‌ಟಿಸಿ ನೌಕರರ ಅಂತರ್ ನಿಗಮ ವರ್ಗಾವಣೆಗೆ ಆಗಸ್ಟ್ 18 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 5 ರಿಂದ ಆಗಸ್ಟ್‌ 18ವರೆಗೂ ಆನ್‌ಲೈನ್‌ ಮೂಲಕ ವರ್ಗಾವಣೆ ನಡೆಯಲಿದೆ ಎಂದು ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 5 ರಿಂದ ಆಗಸ್ಟ್‌ 18ವರೆಗೂ ಆನ್‌ಲೈನ್‌ ಮೂಲಕ ವರ್ಗಾವಣೆ ನಡೆಯಲಿದೆ ಎಂದು ತಿಳಿಸಿದೆ.

ಈ ಕುರಿತು ಮಂಗಳವಾರ (ಜುಲೈ 4) ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ್‌ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ತತ್ಸಂಬಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2021ರ ಮಾರ್ಚ್‌ 26 ರಲ್ಲಿ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, ಅದರಂತೆಯೇ ವರ್ಗಾವಣೆ ನಡೆಯಲಿದೆ ಎಂದು ತಿಳಿಸಿದೆ.

ಆದೇಶದಂತೆ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ 05-07-2023ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಲಿದ್ದು, 18-08-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrttorm/transfer ರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಾಮಾನ್ಯ ವರ್ಗಾವಣೆಯಲ್ಲಿ ಪತಿ/ಪತ್ನಿ ಪ್ರಕರಣಗಳೊಂದಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು/ತೀವ್ರ ತರಹದ ಅನಾರೋಗ್ಯ (ಎಚ್.ಐ.ವಿ ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್‌, ಕಿಡ್ನಿ ವೈಫಲ್ಯ ಹಾಗೂ ಮೆದುಳು ಸಂಬಂಧಿ ಖಾಯಿಲೆಗಳು) ಪ್ರಕರಣಗಳಿಗೆ ವಗಾರ್ವಣೆಯಲ್ಲಿ ಶೇ. 5 ರಷ್ಟು ಮೀಸಲಾತಿ ಕಲ್ಪಿಸಲಾಗಿದ್ದು, ನೌಕರರು ವೈದ್ಯಕೀಯ ಮಂಡಳಿಯು ನೀಡುವ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಇನ್ನು ಪರಸ್ಪರ ವರ್ಗಾವಣೆಗೆ ಪರಸ್ಪರ ನೌಕರರ ಮೂಲ ವೇತನ ಹಾಗೂ ತುಟ್ಟಿ ಭತ್ಯೆ ಶೇ.10 ರ ಬದಲಾಗಿ ಶೇ.15 ರಷ್ಟನ್ನು ಪರಿಗಣಿಸಲಾಗುವುದು ಎಂದು ಹೇಳಿದೆ.

ನೌಕರರು ಈ ಸೌಲಭ್ಯದ ಸದುಪಯೋಗವನ್ನು ಪಡೆಯಲು ತಿಳಿಸಲಾಗಿದ್ದು, ಈ ವಿಷಯವನ್ನು ನೌಕರರ ಗಮನಕ್ಕೆ ತರಲು ಹಾಗೂ ಕೇಂದ್ರ ಕಚೇರಿ/ ವಿಭಾಗ/ ಘಟಕದ/ ತರಬೇತಿ ಕೇಂದ್ರ ಕಾರ್ಯಾಗಾರಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com