ಜುಲೈ 10 ರವರೆಗೆ ರಾಜ್ಯದಲ್ಲಿ ಮಳೆ, ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್; ಜಲಾಶಯಗಳಿಗೆ ಹೆಚ್ಚುತ್ತಿರುವ ಒಳಹರಿವು!

ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಬಹುನಿರೀಕ್ಷಿತ ಮುಂಗಾರು ಮಳೆ ರಾಜ್ಯಕ್ಕೆ ಆಗಮಿಸಿದ್ದು, ರೈತ ಸಮುದಾಯದಲ್ಲಿ ಸಂತಸ ಮೂಡಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಬೆಳಿಗ್ಗೆ ತುಂತುರು ಮಳೆ ಸುರಿಯಿತು. ಆದರೆ ನಗರದ ಕೆಲವು ಭಾಗಗಳಲ್ಲಿ ಜಲಾವೃತಗೊಂಡು ಟ್ರಾಫಿಕ್ ಜಾಮ್ ನಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು.

ಭಾರೀ ಮಳೆಯ ಸಾಧ್ಯತೆ ಇರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ, ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಒಬ್ಬರು ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಮೈಸೂರು, ರಾಮನಗರ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರದಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ಬತ್ತಿ ಹೋಗಿದ್ದ ಅಣೆಕಟ್ಟುಗಳು, ಜಲಾಶಯಗಳು ಭರ್ತಿಯಾಗತೊಡಗಿವೆ.

ಕೆಆರ್ ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 10.17 ಟಿಎಂಸಿ ತಲುಪಿದೆ. ಕಳೆದ ವರ್ಷ ಈ ಬಾರಿ 34.06 ಟಿಎಂಸಿ ನೀರು ಇತ್ತು. 1,249 ಕ್ಯೂಸೆಕ್ ಒಳಹರಿವು ದಾಖಲಾಗಿದೆ.

ಆಲಮಟ್ಟಿ ಅಣೆಕಟ್ಟೆಯಲ್ಲಿ ಕಳೆದ ವರ್ಷ 50.04 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು , ಈ ಬಾರಿ 19.24 ಟಿಎಂಸಿ ನೀರು ದಾಖಲಾಗಿದೆ. ತುಂಗಭದ್ರಾ ಅಣೆಕಟ್ಟಿನಲ್ಲಿ 259 ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದೆ. ಆರಂಭಿಕ ಮಳೆಯ ನಂತರ 3.07 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ವೇಳೆ ಅಣೆಕಟ್ಟೆಯಲ್ಲಿ 50.7 ಟಿಎಂಸಿ ನೀರು ಇತ್ತು.

ನಿರಂತರ ಮಳೆಯಾಗುತ್ತಿರುವುದರಿಂದ ಲಿಂಗನಮಕ್ಕಿ ಅಣೆಕಟ್ಟೆಗೆ 9,237 ಕ್ಯೂಸೆಕ್‌ , ಕಬಿನಿ ಜಲಾಶಯಕ್ಕೆ 3,431 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಭದ್ರಾ ಅಣೆಕಟ್ಟೆಗೆ 2,397 ಕ್ಯೂಸೆಕ್, ಹಾರಂಗಿ ಅಣೆಕಟ್ಟೆಗೆ 1,518 ಕ್ಯೂಸೆಕ್ ಮತ್ತು ಸೂಪಾ ಅಣೆಕಟ್ಟೆಗೆ 1,736 ಕ್ಯೂಸೆಕ್ ನೀರು ಒಳಹರಿವು ಇದೆ.  ವಾರಾಹಿ ಅಣೆಕಟ್ಟು, ಮಲಪ್ರಭಾ ಅಣೆಕಟ್ಟುಗಳಿಗೆ ಇನ್ನೂ ನೀರಿನ ಒಳಹರಿವು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com