ಸರ್ಕಾರದ ಮುಂದೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಪ್ರಸ್ತಾಪವಿಲ್ಲ: ಸಚಿವ ಕೆ.ವೆಂಕಟೇಶ್

ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಅನ್ನು ರದ್ದುಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರದಿಂದ ಸ್ಪಷ್ಟ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ ನಂತರ  ಪರಿಷತ್ತಿನಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಅನ್ನು ರದ್ದುಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರದಿಂದ ಸ್ಪಷ್ಟ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ ನಂತರ  ಪರಿಷತ್ತಿನಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ. ವೆಂಕಟೇಶ್, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ನ್ನು ರದ್ದುಪಡಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ.  ಸಾಧಕ- ಬಾಧಕಗಳನ್ನು ಚರ್ಚಿಸುತ್ತಿದ್ದೇವೆ. ಹಾಗಾಗಿ ಮುಂದೆ ಏನಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಉತ್ತರಿಸಿದರು. ಆದರೂ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು.

ವೆಂಕಟೇಶ್ ಅವರ ಹೇಳಿಕೆಗೆ ಪೂರಕವಾಗಿ ಸಚಿವ ಕೃಷ್ಣಬೈರೇಗೌಡ, ಆರ್. ಬಿ. ತಿಮ್ಮಾಪುರ ಮತ್ತಿತರ ಆಡಳಿತ ಪಕ್ಷದ ಸದಸ್ಯರು, ಕೇಳಿದ ಪ್ರಶ್ನೆಗೆ ಉತ್ತರ ನೀಡಲಾಗಿದೆ. ಆದರೂ ಬಿಜೆಪಿ ಸದಸ್ಯರು ಕಾಲಹರಣ ಮಾಡಲು ಅನಗತ್ಯವಾಗಿ ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಭಾರತ ಗೋ ಮಾಂಸ ರಫ್ತಿನಲ್ಲಿ ವಿಶ್ವದಲ್ಲೇ 2ನೆ ಸ್ಥಾನದಲ್ಲಿದೆ. ಪ್ರತಿವರ್ಷ 26 ಸಾವಿರ ಟನ್‍ಗೂ ಅಧಿಕ ಗೋಮಾಂಸ ರಫ್ತಾಗುತ್ತಿದೆ. ಮೊದಲು ಇದನ್ನು ನಿಲ್ಲಿಸಿ ಎಂದು ಬಿಜೆಪಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು.

ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯುವ ಸಂದರ್ಭದಲ್ಲಿ ಸಭಾಪತಿ ಬಸವರಾಜಹೊರಟ್ಟಿ ಮಧ್ಯ ಪ್ರವೇಶಿಸಿ, ಸದಸ್ಯರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ಕೊಟ್ಟಿದ್ದಾರೆ. ಹೀಗಿದ್ದರೂ ಅದೇ ವಿಷಯವನ್ನು ಯಾಕೆ ಪ್ರಸ್ತಾಪ ಮಾಡುತ್ತೀದ್ದೀರಿ ಎಂದು ಬಿಜೆಪಿ ಸದಸ್ಯರಿಗೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com