ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಸಾವು: ಕಾಲುವೆ ದಾಟುವಾಗ ಕೊಚ್ಚಿಕೊಂಡು ಹೋದ 45 ವರ್ಷದ ವ್ಯಕ್ತಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕಾಲುವೆ ದಾಟುತ್ತಿದ್ದ ವೇಳೆ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನಾರಾಯಣ ಎಂದು ಗುರುತಿಸಲಾದ ವ್ಯಕ್ತಿ ಗುರುವಾರ ಕೊಚ್ಚಿಕೊಂಡು ಹೋಗಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕಾಲುವೆ ದಾಟುತ್ತಿದ್ದ ವೇಳೆ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ನಾರಾಯಣ ಎಂದು ಗುರುತಿಸಲಾದ ವ್ಯಕ್ತಿ ಗುರುವಾರ ಕೊಚ್ಚಿಕೊಂಡು ಹೋಗಿದ್ದಾರೆ.

ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸ್ಥಳೀಯರು ರಕ್ಷಿಸಲು ಕಾರ್ಯಾಚರಣೆ ನಡೆಸಿದರು. ಆದರೆ, ನೀರಿನ ಹರಿವು ಜಾಸ್ತಿಯಿದ್ದದ್ದರಿಂದ ಕಾರ್ಯಾಚರಣೆ ವಿಫಲವಾಯಿತು. 

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸುವಂತೆ ತಹಸೀಲ್ದಾರ್ ಮನವಿ ಮಾಡಿದ್ದಾರೆ.

ಈ ಹಿಂದೆ, ರಾಜ್ಯದಲ್ಲಿ ಜುಲೈ 4 ಮತ್ತು ಜುಲೈ 5 ರ ನಡುವೆ ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ದಕ್ಷಿಣ ಕನ್ನಡದ ಉಳ್ಳಾಲದಲ್ಲಿ ಜುಲೈ 4 ರಂದು ಮಳೆಯ ನೀರಿನಲ್ಲಿ ಸುರೇಶ ಗಟ್ಟಿ (52) ಕಾಲುವೆ ದಾಟುತ್ತಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಅವರ ಕುಟುಂಬ ಸದಸ್ಯರಿಗೆ ಜಿಲ್ಲಾಡಳಿತ 5 ಲಕ್ಷ ರೂ. ಪರಿಹಾರ ನೀಡಿದೆ.

ಜುಲೈ 5 ರಂದು ನಡೆದ ಮತ್ತೊಂದು ಘಟನೆಯಲ್ಲಿ ಕುಳಾಯಿಯಲ್ಲಿ ಸಂತೋಷ್ (34) ಅವರು ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿಯ ಸ್ಪರ್ಶದಿಂದ ಮೃತಪಟ್ಟಿದ್ದರು. 

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಾತನಾಡಿ, ಮೃತರ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com