ಖಾಲಿ ಇರುವ ಸರ್ಕಾರಿ ಹುದ್ದೆಗಳ ಹಂತ ಹಂತವಾಗಿ ಭರ್ತಿಗೆ ಕ್ರಮ: ರಾಜ್ಯ ಸರ್ಕಾರ

ರಾಜ್ಯದ ವಿವಿಧ ಇಲಾಖೆಗಳಲ್ಲಿ2.55 ಲಕ್ಷ ಹುದ್ದೆಗಳು ಖಾಲಿ ಇದ್ದು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ2.55 ಲಕ್ಷ ಹುದ್ದೆಗಳು ಖಾಲಿ ಇದ್ದು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಗುರುವಾರ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಸದಸ್ಯ ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 7,72,025 ಹುದ್ದೆಗಳು ಮಂಜೂರಾಗಿವೆ. ಅದರಲ್ಲಿ 5,16,105 ಹುದ್ದೆಗಳು ಭರ್ತಿಯಾಗಿವೆ. 2.55 ಲಕ್ಷ ಹುದ್ದೆಗಳು ಖಾಲಿ ಇವೆ. ಮಂಜೂರಾದ ಹುದ್ದೆಗಳಿಗೆ ಹೋಲಿಸಿದರೆ ಶೇ. 33ರಷ್ಟು ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರಕಾರಿ ಹುದ್ದೆಗಳ ಜತೆಗೆ 75,415 ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಸರಕಾರದ ಕೆಲಸಕ್ಕೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅದರಲ್ಲೂ ಸಿ ಮತ್ತು ಡಿ ವರ್ಗದ ಹುದ್ದೆಗಳನ್ನು ಹೆಚ್ಚಾಗಿ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ನಿವೃತ್ತಿಯಾದ ಅಧಿಕಾರಿಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಎ, ಬಿ, ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಸರಕಾರದ ಕೆಲಸಕ್ಕೆ ತೊಂದರೆಯಾಗದಂತೆ ಎಲ್ಲ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಇದೇ ವೇಳೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಹಿಂಪಡೆಯುವ ಕುರಿತು ವರದಿ ಸಲ್ಲಿಸಲು ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಪರಿಷತ್ತಿಗೆ ಮಾಹಿತಿ ನೀಡಿದರು.

ಸರ್ಕಾರವು ನೌಕರರೊಂದಿಗೆ ಸಹಾನುಭೂತಿ ಹೊಂದಿದ್ದು, ಪಕ್ಷದ ಪ್ರಣಾಳಿಕೆಯಲ್ಲಿಯೂ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆಯುವುದಾಗಿ ತಿಳಿಸಲಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com