ಕರಾವಳಿಯಲ್ಲಿ ಮಳೆ ಆರ್ಭಟ: ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ; ಸಚಿವ ಗುಂಡೂರಾವ್ ಎಚ್ಚರಿಕೆ

ದ.ಕ.ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಮತ್ತು ನದಿ ತೀರದಲ್ಲಿ ಮಳೆಯಿಂದ ಆಗುವ ಹಾನಿಯನ್ನು ಕಡಿಮೆ ಮಾಡಲು ಸಮನ್ವಯತೆಯಿಂದ ಕೆಲಸ ಮಾಡುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ದಕ್ಷಿಣ ಕನ್ನಡ (ದ.ಕ) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸೂಚನೆ ನೀಡಿದರು.
ದಿನೇಶ್ ಗುಂಡೂರಾವ್.
ದಿನೇಶ್ ಗುಂಡೂರಾವ್.

ಮಂಗಳೂರು: ದ.ಕ.ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಮತ್ತು ನದಿ ತೀರದಲ್ಲಿ ಮಳೆಯಿಂದ ಆಗುವ ಹಾನಿಯನ್ನು ಕಡಿಮೆ ಮಾಡಲು ಸಮನ್ವಯತೆಯಿಂದ ಕೆಲಸ ಮಾಡುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ದಕ್ಷಿಣ ಕನ್ನಡ (ದ.ಕ) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸೂಚನೆ ನೀಡಿದರು.

ಶುಕ್ರವಾರ ರಾತ್ರಿ ಮಂಗಳೂರು ಮಹಾನಗರ ಪಾಲಿಕೆಯ ಕಮಾಂಡ್‌ ಕಂಟ್ರೋಲ್ ರೂಂ ನಲ್ಲಿ ವ್ಯಾಪಕ ಮಳೆ, ಪ್ರವಾಹ ಹಾಗೂ ಕೈಗೊಂಡಿರುವ ಪ್ರವಾಹದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಇಂದು ಮಳೆಯ ಪ್ರಮಾಣ ಕಡಿಮೆಯಾಗಿದೆ, ಆದರೆ ಗುಡ್ಡ ಕುಸಿತ ಪ್ರಕರಣಗಳು ವರದಿಯಾಗುವ ಸಾಧ್ಯತೆಗಳಿವೆ, ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಬೀಳುವ ಸ್ಥಿತಿ, ಬಿರುಕು ಬಿಟ್ಟ ಸ್ಥಿತಿಗಳಲ್ಲಿರುವ ಸೇತುವೆಗಳನ್ನೊಮ್ಮೆ ಪರಿಶೀಲಿಸುವಂತೆ ಲೋಕೋಪಯೋಗಿ ಇಲಾಖೆಯ‌ ಕಾರ್ಯನಿರ್ವಹಕ ಎಂಜಿನಿಯರ್ ಯಶವಂತ್ ಅವರಿಗೆ ಸೂಚನೆ ನೀಡಿದ ಅವರು, ಪ್ರಾಕೃತಿಕ ವಿಕೋಪ‌ ನಿರ್ವಹಣೆಯಲ್ಲಿ ಅಧಿಕಾರಿಗಳಿಂದ ಯಾವುದೇ ಲೋಪ ಆಗಬಾರದು, ಆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು, ಯಾವುದೇ ರೀತಿಯ ಪ್ರಾಕೃತಿಕ ಅನಾಹುತಗಳು ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗೆ ಸಿದ್ಧವಿರಬೇಕು ಎಂದು ಹೇಳಿದರು.

ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಈ ಬಗ್ಗೆ ಅವರಿಗೆ ಸೂಕ್ತ ಮಾಹಿತಿ ನೀಡಿರಬೇಕು, ಅಧಿಕ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವುದು ಸೇರಿದಂತೆ ಸ್ಥಳೀಯವಾಗಿ ಕೈಗೊಳ್ಳಬೇಕಾದ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ಸೂಕ್ತವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ವಿಕೋಪಗಳನ್ನು ಸೂಕ್ತವಾಗಿ ನಿಭಾಯಿಸಲು ತಾಲೂಕು ಮಟ್ಟದಲ್ಲಿ ನಿಯೋಜಿಸಲಾದ ನೋಡಲ್ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು ಹಾಗೂ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com