ಸಾಂದರ್ಭಿಕ ಚಿತ್ರ
ರಾಜ್ಯ
ಡಬಲ್ ಮರ್ಡರ್ ಗೆ ಬೆಚ್ಚಿಬಿದ್ದ ಬೆಳಗಾವಿ: ಮನೆಯಲ್ಲೇ ದಂಪತಿಯ ಬರ್ಬರ ಹತ್ಯೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ.
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ.
ಜುಲೈ 7ರ ಮಧ್ಯರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು 60 ವರ್ಷದ ಗಜೇಂದ್ರ ವಣ್ಣೂರೆ, ಪತ್ನಿ 48 ವರ್ಷದ ದ್ರಾಕ್ಷಾಯಿಣಿ ವಣ್ಣೂರೆ ಎಂದು ತಿಳಿದುಬಂದಿದೆ.
ಮಧ್ಯರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ನಿನ್ನೆಯಿಂದ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇಂದು ಬಾಗಿಲು ಹೊಡೆದು ನೋಡಿದಾಗ ದಂಪತಿ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ.
ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ