ಚಿಕ್ಕಬಳ್ಳಾಪುರದಲ್ಲಿ ನಡೆದ ಸರಣಿ ಅಪಘಾತದಲ್ಲಿ ದಂಪತಿ ಸಾವು!

ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಟೆಂಪೊ ಹರಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ. 
ಅಪಘಾತ ದೃಶ್ಯ
ಅಪಘಾತ ದೃಶ್ಯ
Updated on: 

ಚಿಕ್ಕಬಳ್ಳಾಪುರ: ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಟೆಂಪೊ ಹರಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ. 

ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದ್ದು ಘಟನೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ  ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ನಂತರ ಟೆಂಪೊಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com