9 ಐಎಎಸ್ ಅಧಿಕಾರಿಗಳ ವರ್ಗಾವಣೆ

ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಸೇರಿದಂತೆ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ವಿಧಾನಸೌಧ
ವಿಧಾನಸೌಧ
Updated on

ಬೆಂಗಳೂರು: ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಸೇರಿದಂತೆ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರಾಗಿದ್ದ ಶ್ರೀಮತಿ ಸತ್ಯಭಾಮಾ ಸಿ ಅವರನ್ನು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೂಬಾಲನ್ ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಜಯಪುರ ಜಿಲ್ಲೆಯ ಉಪ ಆಯುಕ್ತರಾಗಿ ನಿಯೋಜಿಸಲಾಗಿದೆ. ಅಲ್ಲದೇ ಇದೇ ಜಿಲ್ಲಾ ಪಂಚಾಯತ್ ನ ವಿಜಯಮಹಾಂತೇಶ ಬಿ. ದಾನಮ್ಮನವರ್ ಅವರನ್ನು ಸಹ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.

ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ದರ್ಶನ್ ಎಚ್.ವಿ. ಅವರನ್ನು ಐಟಿ ಮತ್ತು ಬಿಟಿ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. 

ಹುದ್ದೆಯ ನಿರೀಕ್ಷೆಯಲ್ಲಿದ್ದ ಡಾ. ಅನುರಾಧಾ ಕೆ.ಎನ್. ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ. ಇನ್ನೂ ಅಲ್ಲಿನ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವರ್ನಿತ್ ನೇಗಿ ಅವರನ್ನು ಕೊಡಗು ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com