ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ- ದಿನೇಶ್ ಗುಂಡೂರಾವ್

ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ ನಲ್ಲಿ ಸೋಮವಾರ ಸ್ಪಷ್ಪಪಡಿಸಿದರು. 
ಆಶಾ ಕಾರ್ಯಕರ್ತೆಯರ ಸಾಂದರ್ಭಿಕ ಚಿತ್ರ
ಆಶಾ ಕಾರ್ಯಕರ್ತೆಯರ ಸಾಂದರ್ಭಿಕ ಚಿತ್ರ

ಬೆಂಗಳೂರು: ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ ನಲ್ಲಿ ಸೋಮವಾರ ಸ್ಪಷ್ಪಪಡಿಸಿದರು. 

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ನ ಕೆ. ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 41,119 ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಕಾರ್ಯ ನಿರ್ವಹಣೆ ಆಧಾರದಲ್ಲಿ ಪ್ರತಿ ತಿಂಗಳು ರೂ.5,000 ಗೌರವ ಧನ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ವೇತನ ಹೆಚ್ಚಳ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರು, ಸಿಬ್ಬಂದಿ ಸೇವೆ ಕಾಯಂಗೊಳಿಸಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದರು.ರಾಷ್ಟ್ರೀಯ ಆಯುಷ್ ಅಭಿಯಾನದಡಿ 113 ತಜ್ಞ ವೈದ್ಯರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಯೋಜನೆ ತಾತ್ಕಾಲಿಕವಾಗಿದ್ದು, ವೈದ್ಯ ಹುದ್ದೆಗಳನ್ನು ಕಾಯಂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ವಿಶೇಷ ನೇಮಕಾತಿ ನಿಯಮ ರೂಪಿಸಿ, ಕೃಪಾಂಕ ಹಾಗೂ ವಯೋಮಿತಿ ಸಡಿಲಿಕೆಯ ಅವಕಾಶ ಕಲ್ಪಿಸಲಾಗಿದೆ ಎಂದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com