ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ; ಪೊಕ್ಸೊ ಕಾಯ್ದೆಯಡಿ ಯುವಕನ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಆಕೆ ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಆಕೆ ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಯ ತಾಲೂಕಿನ ಕಲ್ಮಂಡ್ಕ ಗ್ರಾಮದ ಕಾರ್ತಿಕ್ ಎಂದು ಗುರುತಿಸಲಾಗಿರುವ ಯುವಕನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಳ್ಯದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
7ರಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಸ್ಕ್ಯಾನಿಂಗ್ ಬಳಿಕ ಆಕೆ ನಾಲ್ಕು ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಆಕೆ ಕಾರ್ತಿಕ್ ಹೆಸರನ್ನು ಬಹಿರಂಗಪಡಿಸಿದ್ದಾಳೆ. ಬಳಿಕ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com