ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರಿನಲ್ಲಿ 11 ದಿನಗಳಲ್ಲಿ ಹೊಸದಾಗಿ 178 ಡೆಂಗ್ಯೂ ಪ್ರಕರಣ ದಾಖಲು

ಬೆಂಗಳೂರಿನಲ್ಲಿ ಕೇವಲ 11 ದಿನಗಳಲ್ಲಿ 178 ಹೊಸ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರನ್ನು ಎಚ್ಚರಿಸಿದ್ದಾರೆ.
Published on

ಬೆಂಗಳೂರು: ಬೆಂಗಳೂರಿನಲ್ಲಿ ಕೇವಲ 11 ದಿನಗಳಲ್ಲಿ 178 ಹೊಸ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರನ್ನು ಎಚ್ಚರಿಸಿದ್ದಾರೆ.

ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ 3,565 ಜನರಿಗೆ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡಿದ್ದು, 1,009 ಜನರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಕರ್ನಾಟಕದಲ್ಲಿ 900ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಇನ್ನು ಬೆಂಗಳೂರಿನಲ್ಲಿ ಇದುವರೆಗೆ 919 ಪ್ರಕರಣಗಳು ವರದಿಯಾಗಿವೆ. ಆದರೆ, ಡೆಂಗೆಯಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. 2022ರಲ್ಲಿ ಬಿಬಿಎಂಪಿಯಲ್ಲಿ 585 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದವು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ನಿರ್ದೇಶಕಿ ಡಾ.ಶೀಲಾ ಮುರಳಿ ಚಕ್ರವರ್ತಿ ಅವರು ಮಾಹಿತಿ ನೀಡಿದ್ದು, 'ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಆದ್ದರಿಂದ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ. ಡೆಂಗ್ಯೂ ಹೆಚ್ಚಿನ ಸಂದರ್ಭಗಳಲ್ಲಿ ಸಂಕೀರ್ಣವಾಗಿದೆ ಎಂದರು.

'ನಿಮ್ಮನ್ನು ರಕ್ಷಿಸಿಕೊಳ್ಳಲು, ನಿಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಮತ್ತು ಸಣ್ಣ ಪಾತ್ರೆಗಳಲ್ಲಿ ನೀರನ್ನು ಸಂಗ್ರಹವಾಗಲು ಬಿಡಬೇಡಿ. ಇಲ್ಲಿಯೇ ಡೆಂಗ್ಯೂಗೆ ಕಾರಣವಾಗುವ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಡೆಂಗ್ಯೂಗೆ ಚಿಕಿತ್ಸೆಯು ಕೇವಲ ವಿಶ್ರಾಂತಿ ಮತ್ತು ದ್ರವ ಪದಾರ್ಥಗಳನ್ನು ತೆಗೆದುಕೊಳ್ಳಬೇಕು. ತೀವ್ರವಾಗಿ ಅಸ್ವಸ್ಥಗೊಂಡವರು ಮಾತ್ರ ಆಸ್ಪತ್ರೆಗೆ ಸೇರಿಸಬೇಕಾಗುತ್ತದೆ.

"ಆದಾಗ್ಯೂ, ನೀವು ತೀವ್ರವಾದ ಜ್ವರ ಮತ್ತು ದೇಹ ನೋವು ಅನುಭವಿಸಿದರೆ, ನೀವು ವೈದ್ಯರನ್ನು ಸಂಪರ್ಕಿಸಬೇಕು. ಇಲ್ಲದಿದ್ದರೆ, ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಿ ಮತ್ತು ಆರೋಗ್ಯವಾಗಿರಿ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com