ಡಿಪೋ ಮ್ಯಾನೇಜರ್ ಕಿರುಕುಳ: ಡಿಸೇಲ್ ಸುರಿದುಕೊಂಡು KKSRTC ಬಸ್ ಚಾಲಕ ಆತ್ಮಹತ್ಯೆ ಯತ್ನ

ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್​ಆರ್​ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್​ಆರ್​ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ.

ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ. ಸರಿಯಾಗಿ ಡ್ಯೂಟಿ ನೀಡುತ್ತಿಲ್ಲ. ಹೆಚ್ಚುವರಿ ಕೆಲಸ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ಬೀರಣ್ಣ ಆರೋಪಿಸಿದ್ದಾರೆ.

ಅಲ್ಲದೆ, ಕಿರುಕುಳಕ್ಕೆ ಬೇಸತ್ತು ಡಿಪೋದಲ್ಲಿಯೇ ಡಿಸೇಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಿಸೇಲ್ ಸುರಿದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ, ಅನಾಹುತವನ್ನು ತಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com