ಕೊಪ್ಪಳ: ಸಹಕರಿಸು ಎಂದು ಸ್ಟಾಫ್ ನರ್ಸ್​ಗೆ ಕಿರುಕುಳ; ವೈದ್ಯನ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಟಾಫ್ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಪ್ಪಳ: ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಟಾಫ್ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ನರ್ಸ್ ದೂರು ನೀಡಿದ್ದು, ಆರೋಪಿಯು ತನ್ನಿಂದ ಲೈಂಗಿಕ ಪ್ರಯೋಜನ ಪಡೆಯಲು ಕಿರುಕುಳ ನೀಡುತ್ತಿದ್ದರು. ನನಗೆ ಸಹಕರಿಸು ಎಂದು ತನಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಿರುಕುಳ ನೀಡುತ್ತಿರುವ ಬಗ್ಗೆ ತನ್ನ ಪತಿಗೆ ತಿಳಿಸಿದಾಗ, ಆರೋಪಿ ಇನ್ನಷ್ಟು ಕಿರುಕುಳ ನೀಡಲು ಆರಂಭಿಸಿದನು ಎಂದು ದೂರುದಾರರು ತಿಳಿಸಿದ್ದಾರೆ.

ಆರೋಪಿಯು ಆಕೆಯ ಸಂಬಳವನ್ನು ಎರಡು ತಿಂಗಳವರೆಗೆ ತಡೆಹಿಡಿದಿದ್ದು, ಈ ಬಗ್ಗೆ ಆಕೆಯ ಪತಿ ಆತನನ್ನು ಪ್ರಶ್ನಿಸಿದಾಗ ಆತನ ವಿರುದ್ಧವೇ ದೂರು ದಾಖಲಿಸಿ ಜೈಲಿಗಟ್ಟಿದ್ದನು. 

ಸದ್ಯ ವೈದ್ಯನ ಕಿರುಕುಳದಿಂದ ಬೇಸತ್ತ ಸಂತ್ರಸ್ತೆ ಅಳವಂಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಇದರನ್ವಯ ಪೊಲೀಸರು ವೈದ್ಯ ರಮೇಶ್ ವಿರುದ್ಧ ಐಪಿಸಿ ಸೆಕ್ಷನ್ 354, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com