ಶೀಘ್ರವೇ ಪಂಚತಂತ್ರ 2.0 ಪೈಲಟ್ ಯೋಜನೆ ಪ್ರಾರಂಭ: ಪ್ರಿಯಾಂಕ್ ಖರ್ಗೆ

ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ 2022-23ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಂಜೂರಾದ 216 ಕೋಟಿ ಅನುದಾನ ಬಳಕೆಯಾಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ 2022-23ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಂಜೂರಾದ 216 ಕೋಟಿ ಅನುದಾನ ಬಳಕೆಯಾಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ನಡೆದ ಚರ್ಚೆಯ ವೇಳೆ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಿಯಾಂಕ್‌ ಖರ್ಗೆ, ಅಭಿವೃದ್ಧಿ ಉದ್ದೇಶಕ್ಕಾಗಿ 716 ಕೋಟಿ  ಅನುದಾನ ನೀಡಲಾಗಿದೆ, ಆದರೆ ಅದರಲ್ಲಿ ಕೇವಲ ರೂ. 501 ಕೋಟಿ ಬಳಕೆಯಾಗಿದೆ. ಕಲ್ಯಾಣ ಯೋಜನೆಗಳಿಗೆ ನೀಡಿರುವ ಅನುದಾನವನ್ನು ಕಡ್ಡಾಯವಾಗಿ ಬಳಸಿಕೊಳ್ಳಬೇಕು ಮತ್ತು ಅನುದಾನವನ್ನು ಏಕೆ ಬಳಸಿಲ್ಲ ಎಂಬ ಬಗ್ಗೆ ವರದಿ ಕೇಳುವುದಾಗಿ ಹೇಳಿದರು.

 ಪಂಚತಂತ್ರ 2.0 ತಂತ್ರಾಂಶದ ಮೂಲಕ ಪಂಚಾಯತಿಗಳಿಗೆ ನೀಡಿರುವ ಅನುದಾನವನ್ನು ಎರಡು ತಿಂಗಳಲ್ಲಿ ಸದುಪಯೋಗಪಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯ ಸರ್ಕಾರ ಈಗಾಗಲೇ ಪಂಚತಂತ್ರ 2.0 ಸಾಫ್ಟ್‌ವೇರ್‌ನ ಪ್ರಾಯೋಗಿಕ ಚಾಲನೆಯನ್ನು ಪ್ರಾರಂಭಿಸಿದ್ದು, ಶೀಘ್ರದಲ್ಲೇ ಇದನ್ನು ಎರಡು ಆಯ್ದ ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪರಿಚಯಿಸಲಾಗುವುದು ಪ್ರಿಯಾಂಕ್  ತಿಳಿಸಿದ್ದಾರೆ.

ಈ ಹೊಸ ಸಾಫ್ಟ್‌ವೇರ್ ಅನ್ನು ಪರೀಕ್ಷಿಸುವ ಎಲ್ಲೆಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ತಾಂತ್ರಿಕ ದೋಷಗಳು ಕಂಡುಬಂದಿಲ್ಲ. ಸರ್ವರ್ ಬಳಕೆಯ ಪ್ರಮಾಣ ಪತ್ರಗಳಲ್ಲಿಯೂ ಇದುವರೆಗೆ ಯಾವುದೇ ಲೋಪದೋಷ ಕಂಡು ಬಂದಿಲ್ಲ ಎಂದರು.

ಪಂಚಾಯಿತಿ ಸದಸ್ಯರಿಗೆ ಮೂರು ತಿಂಗಳಿಗೊಮ್ಮೆ ನೀಡುವ ಗೌರವಧನವನ್ನು ಪ್ರತಿ ತಿಂಗಳು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಬೇಕು ಎಂದು ಸದಸ್ಯರೊಬ್ಬರು ಸೂಚಿಸಿದಾಗ, ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ಖರ್ಗೆ ಉತ್ತರಿಸಿದರು.

ನಕಲಿ ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ 836 ಪ್ರಕರಣಗಳು ವರದಿಯಾಗಿವೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ವಿವರಿಸಿದರು. ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಒದಗಿಸಿ ಸರ್ಕಾರಿ ಉದ್ಯೋಗ ಪಡೆದಿರುವ 836 ಪ್ರಕರಣಗಳು ವರದಿಯಾಗಿವೆ. ಅದರಲ್ಲಿ  93 ಸೇವೆಗಳಿಂದ ವಜಾಗೊಳಿಸಲಾಗಿದೆ ಮತ್ತು 238 ಪ್ರಕರಣಗಳು ಜಿಲ್ಲಾ ಮಟ್ಟದ ಜಾತಿ ಪರಿಶೀಲನಾ ಸಮಿತಿಗಳಲ್ಲಿ ಬಾಕಿ ಉಳಿದಿವೆ ಎಂದರು

ಇದಲ್ಲದೆ, ಅಂತಹ ಪ್ರಕರಣಗಳ ತನಿಖೆಗಾಗಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವನ್ನು (ಡಿಸಿಆರ್‌ಇ) ಬಲಪಡಿಸಲಾಗುವುದು ಮತ್ತು ತಪ್ಪಿತಸ್ಥರಾಗಿದ್ದರೆ ಶಿಕ್ಷೆಯನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com