ಬೆಂಗಳೂರು: ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
ಯಶಸ್ವಿ ಉಡಾವಣೆಗಾಗಿ ಅವರು ಬೆಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು (ಇಸ್ರೋ) ಅಭಿನಂದಿಸಿದರು.
'ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ಹೊಸ ಮೈಲಿಗಲ್ಲು' ಎಂದು ಮುಖ್ಯಮಂತ್ರಿ ಹೇಳಿದರು.
ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
Advertisement