ಬಿಸಿಯೂಟ ಕಾರ್ಯಕರ್ತೆಯರು ಇನ್ಮುಂದೆ ಬಳೆ ತೊಡುವಂತಿಲ್ಲ ಆದೇಶ ರಾಜ್ಯ ಸರ್ಕಾರದ್ದಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.
ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಕುರಿತಂತೆ ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಆದೇಶಿಸಿದೆ ಎಂದು ಹೇಳಲಾಗುತ್ತಿದೆ. 

ಬಿಸಿಯೂಟ ತಯಾರು ಮಾಡುವ ಅಡುಗೆ ಸಿಬ್ಬಂದಿ ಬಹುತೇಕ ಮಹಿಳೆಯರು ಬಳೆ, ಬಿಂದಿಗೆ ಧರಿಸುತ್ತಾರೆ. ಆದರೆ ಇದೀಗ ಶಿಕ್ಷಣ ಇಲಾಖೆಯ ಆದೇಶದಿಂದ ಅನೇಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಖ್ಯಮಂತ್ರಿ ಸ್ಪಷ್ಟನೆ: ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ  ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com