ರಾಮನಗರ: 50 ಸಾವಿರ ರೂ. ಲಂಚ ಸ್ವೀಕಾರ; ಸ್ನೇಹಿತ ಸೇರಿ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್‌ಕಾನ್ಸ್‌ಟೇಬಲ್‌ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: 50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್‌ಕಾನ್ಸ್‌ಟೇಬಲ್‌ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಜತೆಗೆ ಅವರ ಪರವಾಗಿ ಲಂಚ ಪಡೆದ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೂರು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿ ಬೆಂಗಳೂರಿನ ನಿವಾಸಿ ಮಂಜೇಗೌಡ ಎಂಬುವವರಿಂದ ಮಹೇಶ್ 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಮಹೇಶ್ ಈಗಾಗಲೇ 75 ಸಾವಿರ ರೂ. ಲಂಚವನ್ನು ನಗದು ರೂಪದಲ್ಲಿ ಪಡೆದಿದ್ದಾರೆ.

ಹೆಚ್ಚಿನ ಹಣ ನೀಡಲು ಇಚ್ಛಿಸದ ಮಂಜೇಗೌಡ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು. ದೂರಿನ ಆಧಾರದ ಮೇಲೆ ಭಾನುವಾರ ಬೆಂಗಳೂರಿನ ಪಾರ್ಟಿ ಹಾಲ್‌ನಲ್ಲಿ ಬಲೆ ಬೀಸಲಾಗಿದೆ. 

ಮಹೇಶ್ ಪರವಾಗಿ ಉತ್ತರಹಳ್ಳಿಯ ರಮೇಶ್ ದೂರುದಾರರಿಂದ 50,000 ರೂ.ಗಳನ್ನು ಪಡೆದಿದ್ದು, ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com