ಇಂದಿನಿಂದ ಎರಡು ದಿನ ವಿರೋಧ ಪಕ್ಷಗಳ ಸಭೆ: ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ, ಪಾರ್ಕಿಂಗ್ ಕೂಡ ನಿಷೇಧ

ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ ತಾಜ್ ವೆಸ್ಟ್ ಎಂಡ್‌ ಹೋಟೆಲ್‌ನಲ್ಲಿ ನಡೆಯುವ ಸಭೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ವಾಹನ ಚಾಲಕರು ಪರ್ಯಾಯ ಮಾರ್ಗಗಳನ್ನು ಬಳಸಲು ಕೇಳಿಕೊಂಡಿದ್ದಾರೆ ಮತ್ತು ಆ ಸ್ಥಳದ ಸುತ್ತಲೂ ಪಾರ್ಕಿಂಗ್ ಮಾಡುವುದನ್ನು ಕೂಡ ನಿಷೇಧಿಸಿದ್ದಾರೆ.
ಬೆಂಗಳೂರು ಟ್ರಾಫಿಕ್ (ಸಂಗ್ರಹ ಚಿತ್ರ)
ಬೆಂಗಳೂರು ಟ್ರಾಫಿಕ್ (ಸಂಗ್ರಹ ಚಿತ್ರ)

ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಶತಾಯಗತಾಯ ಆಢಳಿತಾರೂಢ ಬಿಜೆಪಿಯನ್ನು ಸೋಲಿಸಲೇ ಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ವಿವಿಧ ಪಕ್ಷಗಳ ರಾಷ್ಟ್ರ, ರಾಜ್ಯ ಮಟ್ಟದ ನಾಯಕರು ಬೆಂಗಳೂರಿಗೆ ಆಗಮಿಸುತ್ತಿದ್ದು, ಹಲವು ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.

ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ವಿರೋಧ ಪಕ್ಷಗಳ ಸಭೆಯಲ್ಲಿ 26 ವಿಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ ತಾಜ್ ವೆಸ್ಟ್ ಎಂಡ್‌ ಹೋಟೆಲ್‌ನಲ್ಲಿ ನಡೆಯುವ ಸಭೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ವಿಧಾನಸಭೆ ಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ವಾಹನ ಚಾಲಕರು ಪರ್ಯಾಯ ಮಾರ್ಗಗಳನ್ನು ಬಳಸಲು ಕೇಳಿಕೊಂಡಿದ್ದಾರೆ ಮತ್ತು ಆ ಸ್ಥಳದ ಸುತ್ತಲೂ ಪಾರ್ಕಿಂಗ್ ಮಾಡುವುದನ್ನು ಕೂಡ ನಿಷೇಧಿಸಿದ್ದಾರೆ.

ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಅರಮನೆ ರಸ್ತೆ, ರೇಸ್‌ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆ ಮತ್ತು ಬಳ್ಳಾರಿ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇದಲ್ಲದೆ, ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಮತ್ತು ರೇಸ್‌ಕೋರ್ಸ್ ರಸ್ತೆಗಳಲ್ಲಿ ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

ಹೀಗಾಗಿ ಇಂದು ಮತ್ತು ನಾಳೆ ವಾಹನ ಸವಾರರು ಈ ಮಾರ್ಗಗಳನ್ನು ಹೊರತುಪಡಿಸಿ ಪರ್ಯಾಯ ಮಾರ್ಗಗಳಲ್ಲಿ ಚಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ವಿರೋಧ ಪಕ್ಷಗಳು ಈ ಸಭೆಯಲ್ಲಿ ಕಾರ್ಯತಂತ್ರವನ್ನು ರೂಪಿಸಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com