ಸಾಂದರ್ಭಿಕ ಚಿತ್ರ
ರಾಜ್ಯ
ಮಂಗಳೂರು: ನಿವೃತ್ತ ಕಸ್ಟಮ್ಸ್ ಅಧಿಕಾರಿ ಶವವಾಗಿ ಪತ್ತೆ
ಉಡುಪಿ ಜಿಲ್ಲೆಯ ಮಣಿಪಾಲದ ನರಸಿಂಗೇ ದೇವಸ್ಥಾನದ ಬಳಿ ಒಂಟಿಯಾಗಿ ವಾಸಿಸುತ್ತಿದ್ದ ನಿವೃತ್ತ ಕಸ್ಟಮ್ಸ್ ಅಧಿಕಾರಿಯೊಬ್ಬರು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ಉಡುಪಿ ಜಿಲ್ಲೆಯ ಮಣಿಪಾಲದ ನರಸಿಂಗೇ ದೇವಸ್ಥಾನದ ಬಳಿ ಒಂಟಿಯಾಗಿ ವಾಸಿಸುತ್ತಿದ್ದ ನಿವೃತ್ತ ಕಸ್ಟಮ್ಸ್ ಅಧಿಕಾರಿಯೊಬ್ಬರು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು 83 ವರ್ಷದ ಪೆರ್ದೂರು ಗೋಪಾಲ್ ನಾಯಕ್ ಎಂದು ಗುರುತಿಸಲಾಗಿದೆ. ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ನಾಯಕ್ ಅವರು ಕಾರವಾರ ಮತ್ತು ಕೊಚ್ಚಿಯಲ್ಲಿ ಕಸ್ಟಮ್ಸ್ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ನಾಯಕ್ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಒಂಟಿ ಜೀವನ ನಡೆಸುತ್ತಿದ್ದರು. ವಾರದ ಹಿಂದೆ ಅವರ ಮಗಳು ಅವರನ್ನು ಭೇಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಿಂದ ದುರ್ವಾಸನೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಶವ ಪತ್ತೆಯಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ