ಬೆಂಗಳೂರಿನಲ್ಲಿ ಬಂಧಿತರಾದ ಐವರು ಶಂಕಿತ ಉಗ್ರರು 7 ದಿನ ಸಿಸಿಬಿ ಕಸ್ಟಡಿಗೆ

ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. 
ಶಂಕಿತ ಉಗ್ರರು
ಶಂಕಿತ ಉಗ್ರರು

ಬೆಂಗಳೂರು: ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. 

ಬಂಧಿತ ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್​ ನನ್ನು ಇಂದು ಸಿಸಿಬಿ ಕೋರ್ಟ್ ಗೆ ಹಾಜರುಪಡಿಸಿದ್ದು 15 ದಿನಗಳ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಆದರೆ ನ್ಯಾಯಾಲಯ 7 ದಿನಗಳ ಕಾಲ ಕಸ್ಟಡಿಗೆ ನೀಡಿದೆ. 

ಬಂಧಿತ ಶಂತಕ ಉಗ್ರರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 

2017ರ ಅಕ್ಟೋಬರ್​ನಲ್ಲಿ ಬೆಂಗಳೂರಿನ ಆರ್​.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಸಿಸಿಬಿಯು ನಗರದ ವಿವಿಧ ಪ್ರದೇಶಗಳಿಂದ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿ ಅವರಿಂದ ಅನೇಕ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com