ಚಂದ್ರಯಾನ -3 ಕುರಿತು ಟೀಕೆ: ಉಪನ್ಯಾಸಕ ಹುಲಿಕುಂಟೆ ಮೂರ್ತಿಗೆ ನೋಟಿಸ್ ಜಾರಿ

ಚಂದ್ರಯಾನ-3 ಕುರಿತು ಟೀಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಹುಲಿಕುಂಟೆ ಮೂರ್ತಿ ಅವರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು.
Updated on

ಬೆಂಗಳೂರು: ಚಂದ್ರಯಾನ-3 ಕುರಿತು ಟೀಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಹುಲಿಕುಂಟೆ ಮೂರ್ತಿ ಅವರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದೆ.

ಚಂದ್ರಯಾನಕ್ಕೂ ಮೊದಲು ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ್ದ ವಿಜ್ಞಾನಿಗಳ ಧೋರಣೆಯನ್ನು ಮೂರ್ತಿಯವರು ಖಂಡಿಸಿದ್ದರು. ’ಚಂದ್ರಯಾನಕ್ಕೆ ತಿರುಪತಿ ನಾಮ’ ಎಂದು ಟೀಕಿಸಿದ್ದರು.

ಈ ಪೋಸ್ಟ್ ವೈರಲ್ ಆಗಿದ್ದು, ಉಪನ್ಯಾಸಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಎಸ್‌.ಸುರೇಶ್‌ ಕುಮಾರ್ ಶಾಲಾ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದರು.

ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿರುವ ಕುರಿತು ಮೂರ್ತಿ ಹಾಗೂ ಅವರ ಪತ್ನಿ ವಿರುದ್ಧ ಹಲವರು ಅವಾಚ್ಯವಾಗಿ ಟೀಕೆ ಮಾಡಿದ್ದು, ಬೆದರಿಕೆ ಹಾಕಿದ್ದಾರೆಂದು ಮೂರ್ತಿಯವರು 30 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com