ಮೇಲಾಧಿಕಾರಿಯಿಂದ ಕಿರುಕುಳ ಆರೋಪ: ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶುಕ್ರವಾರ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶುಕ್ರವಾರ ನಡೆದಿದೆ. 

ಆತ್ಮಹತ್ಯೆಗೆ ಶರಣಾದ ಕಂಡಕ್ಟರ್ ಅನ್ನು ಉಪ್ಪುಕುಂಟೆ ಗ್ರಾಮದ ಸೋಮಾಚಾರಿ(50) ಎಂದು ಗುರುತಿಸಲಾಗಿದ್ದು. ಮೃತ ಕಂಡಕ್ಟರ್​ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು. ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. 

ಹಿರಿಯ ಅಧಿಕಾರಿಯ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ಇಂದು ಬೆಳಗಿನ ಜಾವ ಅವರ ತೋಟದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com