ತಜ್ಞರ ಜೊತೆ ಮಾತುಕತೆ ನಂತರ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು: ಸಚಿವ ಮಧು ಬಂಗಾರಪ್ಪ

ಶಿಕ್ಷಣ ಕ್ಷೇತ್ರದ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.
ಮಧು ಬಂಗಾರಪ್ಪ
ಮಧು ಬಂಗಾರಪ್ಪ

ಮಂಗಳೂರು: ಶಿಕ್ಷಣ ಕ್ಷೇತ್ರದ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ಪಠ್ಯಕ್ರಮವನ್ನು ಬದಲಾಯಿಸದೆ ಹೊಸ ಪಠ್ಯಕ್ರಮದಲ್ಲಿ ಸಣ್ಣ ಬದಲಾವಣೆಗಳನ್ನು ತರಲಾಗಿದೆ ಎಂದರು.

ಪಠ್ಯಕ್ರಮವನ್ನು ಪರಿಶೀಲಿಸಿದ ನಂತರ, ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಗತ್ಯವಾದ ಪಾಠಗಳನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ. ಪಠ್ಯಗಳನ್ನು ಪರಿಷ್ಕರಿಸುವ ಹಿಂದೆ ಯಾವುದೇ ರಾಜಕೀಯ ಅಜೆಂಡಾ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲೆಗಳಲ್ಲಿ ಶಿಕ್ಷಕರ ವರ್ಗಾವಣೆಯನ್ನು ಆನ್‌ಲೈನ್ ಪ್ರಕ್ರಿಯೆಯ ಮೂಲಕ ಮಾಡಲಾಗಿದೆ. ಈ ವಿಚಾರವಾಗಿ ನ್ಯಾಯಾಲಯವು ಅನುಮತಿ ನೀಡಿದ ನಂತರ 13,500 ಖಾಯಂ ಶಿಕ್ಷಕರನ್ನು ನೇಮಿಸಲು ಸರ್ಕಾರ ಯೋಜಿಸಿದೆ ಎಂದು ಅವರು ಹೇಳಿದರು.

ಒಂದರಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ಬಾರಿ ಚಿಕ್ಕಿ, ಮೊಟ್ಟೆ ಮತ್ತು ಬಾಳೆಹಣ್ಣು ನೀಡುವ ಯೋಜನೆಯನ್ನು ಸರ್ಕಾರ ಹೊಂದಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ಗೆ ಜನರು ನೀಡಿರುವ ಉತ್ತಮ ಜನಾದೇಶವನ್ನು ಬಳಸಿಕೊಂಡು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com