ಅಮಾನತುಗೊಂಡಿದ್ದ ಆರ್‌ಡಿಪಿಆರ್‌ ಅಧಿಕಾರಿಗೆ ಪಿಡಬ್ಲ್ಯೂಡಿಯಲ್ಲಿ ಉತ್ತಮ ಹುದ್ದೆ: ಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗ!

ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ.

ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಕರ್ತವ್ಯದಿಂದ ಅಮಾನತುಗೊಂಡಿದ್ದ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಸಚಿವ ಸತೀಶ್ ಜಾರಕಿಹೊಳಿ ಅವರು, ಪಿಡಬ್ಲ್ಯೂಡಿಯಲ್ಲಿ ಉತ್ತಮ ಹುದ್ದೆಯನ್ನು ನೀಡಿರುವುದು ಕಂಡು ಬಂದಿದೆ.

ತುಮಕೂರು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎಸ್ ಆರ್ ಹರೀಶ್ ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು.

ಯೋಜನೆಯ ಟೆಂಡರ್ ಕರೆಯಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ತಿಂಗಳ ಹಿಂದೆ ರಾಜ್ಯದ ಬೊಕ್ಕಸಕ್ಕೆ 2.78 ಕೋಟಿ ರೂ.ನಷ್ಟ ಉಂಟಾಗಿತ್ತು ಎಂದು ಹೇಳಲಾಗುತ್ತು. ಹೀಗಾಗಿ ಅವರನ್ನು ಸಚಿವ ಪ್ರಿಯಾಂಕ್ ಖರ್ಗೆಯವರು ಅಮಾನತು ಮಾಡಿದ್ದರು.

ಆದರೆ, ಶುಕ್ರವಾರ ತುಮಕೂರಿನ ಪಿಡಬ್ಲ್ಯುಡಿಯಲ್ಲಿ ಮಹಿಳಾ ಅಧಿಕಾರಿ ಹೇಮಲತಾ ಆರ್ ಅವರ ಸ್ಥಾನಕ್ಕೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಎಸ್ ಆರ್ ಹರೀಶ್ ಅವರು ನೇಮಕ ಮಾಡಿರುವುದು ಕಂಡು ಬಂದಿದೆ.

ಒಂದು ಇಲಾಖೆಯಿಂದ ಇನ್ನೊಂದು ಇಲಾಖೆಗೆ ವರ್ಗಾವಣೆಯಾಗಿರುವುದರಿಂದ ಇದಕ್ಕೆ ಪ್ರಿಯಾಂಕ್ ಖರ್ಗೆಯವರ ಒಪ್ಪಿಗೆಯ ಅಗತ್ಯವಿರುವುದಿಲ್ಲ ಎಂದು ಮೂಲಗಳ ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com