ನೈಸ್ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಕ್ರಮ: ಡಿಸಿಎಂ ಡಿಕೆ.ಶಿವಕುಮಾರ್

ನೈಸ್ ರಸ್ತೆ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ನೈಸ್ ರಸ್ತೆ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು.

ಬೆಂಗಳೂರಿನ ಸೋಂಪುರ ಗ್ರಾಮದ ರೈತರ ನಿಯೋಗವು ಕುಮಾರಕೃಪಾ ಅತಿಥಿ ಗೃಹದಲ್ಲಿ ಶಿವಕುಮಾರ್ ಅವರನ್ನು ಮಂಗಳವಾರ ಭೇಟಿ ಮಾಡಿ ಅಹವಾಲು ಸಲ್ಲಿಸಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು  ಈ ಬಗ್ಗೆ ಭರವಸೆ ನೀಡಿದರು.

ನೈಸ್ ರಸ್ತೆಗೆ ನಮ್ಮ ಜಮೀನು ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳಾಗಿವೆ. ಭೂಮಿಗೆ ಪರಿಹಾರ ಮೊತ್ತ ಸಿಕ್ಕಿದೆ. ಆದರೆ, ನಮಗೆ ನಿವೇಶನ ನೀಡುವ ಭರವಸೆ ಈವರೆಗೂ ಈಡೇರಿಲ್ಲ. ಅಧಿಕಾರಿಗಳನ್ನು ಕೇಳಿದರೆ, ಸರ್ಕಾರದಿಂದ ಅನುಮತಿ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಯಾವೊಬ್ಬ ರೈತರಿಗೂ ನಿವೇಶನ ಹಂಚಿಕೆ ಮಾಡಿಲ್ಲ. ಸೋಂಪುರ ಗ್ರಾಮಕ್ಕೆ ನೀವು ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಖುದ್ದು ಪರಿಶೀಲಿಸಿ, ಸಮಸ್ಯೆ ಬಗೆಹರಿಸಬೇಕು ಎಂದು ರೈತರು ಮನವಿ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ಈ ವಿಚಾರವಾಗಿ ಮೊನ್ನೆಯಷ್ಟೇ ಅಧಿಕಾರಿಗಳ ಜತೆ ಚರ್ಚಿಸಿದೆ. ಸುಪ್ರೀಂಕೋರ್ಟ್ ನಲ್ಲಿ KIADB ಆಕ್ಟ್ ಹಾಗೂ ಬಿಡಿಎ ಆಕ್ಟ್​ನಲ್ಲಿ ಹಳೆ ದರಕ್ಕೆ ಪರಿಹಾರ ನೀಡಬೇಕು ಎಂದು ಆದೇಶ ನೀಡಲಾಗಿದೆ. ಈ ವಿಚಾರವಾಗಿ ಎರಡು ದಿನಗಳಲ್ಲಿ ಮಾತನಾಡುತ್ತೇನೆ. ನಿಮ್ಮ ಮನವಿ ಪರಿಶೀಲಿಸುತ್ತೇನೆ. ನಿವೇಶನ ವಿಚಾರ ನನ್ನ ಗಮನಕ್ಕೆ ಬಂದಿದೆ. ನಿವೇಶನ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು. ಉಳಿದ ವಿಚಾರಗಳನ್ನು ಪರಿಶೀಲನೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com