ಬೆಂಗಳೂರು: ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದು ಮಹಿಳೆಗೆ ಲೈಂಗಿಕ ಕಿರುಕುಳ!

ನಗರದಲ್ಲಿ ನೆಲೆಸಿರುವ ಕೇರಳ ಮೂಲದ 25 ವರ್ಷದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯಿಂದ ಲಿಫ್ಟ್ ತೆಗೆದುಕೊಂಡು, ಭಾರಿ ಬೆಲೆ ತೆತ್ತ ಘಟನೆಯೊಂದು ಮಡಿವಾಳ ಪೊಲೀಸ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಗರದಲ್ಲಿ ನೆಲೆಸಿರುವ ಕೇರಳ ಮೂಲದ 25 ವರ್ಷದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯಿಂದ ಲಿಫ್ಟ್ ತೆಗೆದುಕೊಂಡು, ಭಾರಿ ಬೆಲೆ ತೆತ್ತ ಘಟನೆಯೊಂದು ಮಡಿವಾಳ ಪೊಲೀಸ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಕೋರಮಂಗಲ 1ನೇ ಬ್ಲಾಕ್‌ನಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ತಂಗಿರುವ ಸಂತ್ರಸ್ತೆ ತನ್ನ ಊರಿಗೆ ಹೋಗಿದ್ದಳು. ಖಾಸಗಿ ಬಸ್‌ನಲ್ಲಿ ನಗರಕ್ಕೆ ಹಿಂತಿರುಗಿ ಭಾನುವಾರ ಬೆಳಗ್ಗೆ 5 ಗಂಟೆಗೆ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಇಳಿದಿದ್ದರು.

ನಂತರ ವಸತಿ ಗೃಹಕ್ಕೆ ತೆರಳಲು ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಕಾರಿನಲ್ಲಿ ಸ್ಥಳಕ್ಕೆ ಬಂದಿರುವ ದುಷ್ಕರ್ಮಿ 200 ರೂ.ಗೆ ಡ್ರಾಪ್ ಕೊಡುವುದಾಗಿ ಹೇಳಿ ಆಕೆಯನ್ನು ಕಾರು ಹತ್ತಿಸಿಕೊಂಡಿದ್ದಾನೆ. ಬಳಿಕ ಮಹಿಳೆನಯ್ನು ಪಿಜಿವರೆಗೂ ಡ್ರಾಪ್ ಮಾಡಿದ್ದಾನೆ. ಕಾರು ಇಳಿದ ಮಹಿಳೆ ಯುಪಿಐ ಮೂಲಕ ಹಣ ಪಾವತಿಸುತ್ತಿದ್ದರು. ಈ ವೇಳೆ ಆಕೆಯನ್ನು ತನ್ನ ಹತ್ತಿರ ಎಳೆದುಕೊಂಡ ಆರೋಪಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಬಳಿಕ ಮಹಿಳೆ ಪಕ್ಕದ ಕಟ್ಟಡದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಾರಿನ ನೋಂದಣಿ ಸಂಖ್ಯೆ ಪತ್ತೆಯಾಗಿದೆ. ಈ ಸಂಬಂಧ ಮಡಿವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಕ್ಕಸಂದ್ರದ ಟೀಚರ್ಸ್ ಕಾಲೋನಿಯ 5ನೇ ಮುಖ್ಯರಸ್ತೆಯಲ್ಲಿ ಬೆಳಗ್ಗೆ 5.24ಕ್ಕೆ ಈ ಘಟನೆ ನಡೆದಿದೆ. ನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತ ಮಹಿಳೆ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ಚರ್ಚಿಸಿ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ಬಳಿಕ, ಕಾರಿನಿಂದ ಕೆಳಗಿಳಿದು ಎಚ್ಚರಿಕೆ ನೀಡಿದ್ದ. ಆತನ ವರ್ತನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಲು ಆರಂಭಿಸುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾದ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿದ್ದ ಕಟ್ಟಡದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಚಿತ್ರಗಳು ಅಸ್ಪಷ್ಟವಾಗಿವೆ ಮತ್ತು ನೋಂದಣಿ ಫಲಕದ ಕೆಲವು ಸಂಖ್ಯೆಗಳು ಮಾತ್ರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಿನ ನಿಖರ ಸಂಖ್ಯೆಯನ್ನು ಪಡೆಯಲು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ. ಕ್ಯಾಬ್ ಅಲ್ಲದ ಕಾರಿನಲ್ಲಿ ಮಹಿಳೆ ಸಂಚರಿಸಿದ್ದರು ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆ ಸಂಬಂಧ ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com