ಕೆಎಸ್‌ಪಿಸಿಬಿ ಅಕ್ರಮ: ಪರಿಶೀಲನೆಗೆ ನೋಡಲ್ ಅಧಿಕಾರಿಯಾಗಿ ಮಹದೇವ ನೇಮಕ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ಅಸಮರ್ಪಕ ಕಾರ್ಯನಿರ್ವಹಣೆಯ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಕ್ರಮಗಳ ಬಗ್ಗೆ ಪರಿಶೀಲನೆಗೆ ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ಅಸಮರ್ಪಕ ಕಾರ್ಯನಿರ್ವಹಣೆಯ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಕ್ರಮಗಳ ಬಗ್ಗೆ ಪರಿಶೀಲನೆಗೆ ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹದೇವ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಜುಲೈ 26, 2023 ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಪಾರದರ್ಶಕ ಕಾಯಿದೆಗೆ ಅನುಗುಣವಾಗಿ ಜಾಗೃತಿ ಅಭಿಯಾನಗಳು ಮತ್ತು ಟೆಂಡರ್‌ಗಳನ್ನು ನಡೆಸಲಾಗಿಲ್ಲ, ಆದ್ದರಿಂದ ಈ ಬಗ್ಗೆ ವಿವರವಾಗಿ ತನಿಖೆ ನಡೆಸಬೇಕಾಗಿದೆ. ಸದಸ್ಯ ಕಾರ್ಯದರ್ಶಿ ಮತ್ತು ಅಧ್ಯಕ್ಷರು ಸೇರಿದಂತೆ ಎಲ್ಲಾ ಕೆಎಸ್‌ಪಿಸಿಬಿ ಅಧಿಕಾರಿಗಳು ತನಿಖೆಗೆ ಸಹಕರಿಸಬೇಕು ಮತ್ತು ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ನೋಡಲ್ ಅಧಿಕಾರಿಯೊಂದಿಗೆ ಹಂಚಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಎಸ್‌ಪಿಸಿಬಿಯಿಂದ ಅನೇಕ ದೂರುಗಳು ನಾಗರಿಕರಿಂದ ಮಾತ್ರವಲ್ಲ, ಅಧಿಕಾರಿಗಳಿಂದಲೂ ಬರುತ್ತಿವೆ. ಇದರ ಜೊತೆಗೆ ಅಧಿಕಾರಿಯೊಬ್ಬರಿಂದ ದೂರು ಕೂಡ ಬಂದಿದೆ. ಈ ಹಿಂದೆ ಆಡಳಿತ ಮಂಡಳಿಯು ಅರಿಶಿನ ಗಣಪತಿ ಮೂರ್ತಿ, ಜಾಹೀರಾತು, ಹೋರ್ಡಿಂಗ್‌ ಹಾಕುವುದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಸೇರಿದಂತೆ ಹಲವು ಜಾಗೃತಿ ಅಭಿಯಾನಗಳನ್ನು ನಡೆಸಿದ್ದು, ವಿವಿಧ ಚಟುವಟಿಕೆಗಳಿಗೆ ಸೂಕ್ತ ಕ್ರಮ ಅನುಸರಿಸಿಲ್ಲ. ನಿಗದಿತ ಸರ್ಕಾರಿ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ, ಆದ್ದರಿಂದ ಸಮಸ್ಯೆಯನ್ನು ಅರಿಯಲು ಹಾಗೂ ಅದನ್ನು ಸರಿಪಡಿಸಲು ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಪರಿಸರ, ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೂರುಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಸಿಬ್ಬಂದಿಗಳಲ್ಲಿ ಹೊಣೆಗಾರಿಕೆ ಮತ್ತು ಗಂಭೀರತೆ ಇಲ್ಲದಂತಾಗಿದೆ. ಹೀಗಾಗಿ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳ ನೇಮಕಾತಿ, ವರ್ಗಾವಣೆಗಳು ಮತ್ತು ಅಧಿಕಾರಿಗಳು ಕಾರ್ಯನಿರ್ವಹಿಸುವ ವಿಧಾನದ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com