ಭೀಕರ ಅಪಘಾತ: ಕಾರು ಗುದ್ದಿದ ರಭಸಕ್ಕೆ 15 ಅಡಿ ಎತ್ತರಕ್ಕೆ ಹಾರಿ ಬಿದ್ದ ವಿದ್ಯಾರ್ಥಿನಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ವೇಗವಾಗಿ ಬಂದ ಕಾರೊಂದು ಬೈಕ್ ಸವಾರ ಹಾಗೂ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ 15 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಅಪಘಾತ
ರಾಯಚೂರು ಅಪಘಾತ

ರಾಯಚೂರು: ವೇಗವಾಗಿ ಬಂದ ಕಾರೊಂದು ಬೈಕ್ ಸವಾರ ಹಾಗೂ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ 15 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ಬೈಕ್‍ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿ ಬರೊಬ್ಬರಿ 15 ಅಡಿ ಎತ್ತರಕ್ಕೆ ಹಾರಿ ಬಿದ್ದಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ನಗರದ ಸ್ಟೇಷನ್ ವೃತ್ತದಿಂದ ಅತೀವೇಗದಲ್ಲಿ ಬರುತ್ತಿದ್ದ ಕಾರು ರಸ್ತೆ ವಿಭಜಕದಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದು ಬಳಿಕ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಶಿವರಾಜ್ ಪಾಟೀಲ್‍ಗೆ ಕಾಲು ಮುರಿತವಾಗಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಸ್ತೆ ಬದಿಯಲ್ಲಿ ತೆರಳುತ್ತಿದ್ದ ನಾಲ್ವರು ಕಾಲೇಜು ವಿದ್ಯಾರ್ಥಿನಿಯರಲ್ಲಿ ಇಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯರಾದ ಜ್ಯೋತಿ ಹಾಗೂ ಶಿವಮಂಗಳಗೆ ಸಣ್ಣಪುಟ್ಟ ಗಾಯಗಳಾಗಿವೆ. 

ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಬೈಕ್ ಸವಾರ ಶಿವರಾಜ್ ಪಾಟೀಲ್ ಎಂಬುವವರಿಗೂ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿನಿಯರಾದ ದೇವದುರ್ಗ ತಾಲೂಕು ಬೂಮನಗುಂಡ ತಾಲೂಕಿನ ಶಿವಮಂಗಳ ಹಾಗೂ ಸಿರವಾರ ತಾಲೂಕು ಬೇವಿನೂರು ಗ್ರಾಮದ ಜ್ಯೋತಿ ಎಂದು ಗುರುತಿಸಲಾಗಿದೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಲಾಗಿದೆ.

15 ಅಡಿ ಹಾರಿ ಬಿದ್ದರೂ ಬದುಕಿದ ವಿದ್ಯಾರ್ಥಿನಿ
ಈ ಘಟನೆ ಜುಲೈ 18ರಂದು ನಡೆದಿದ್ದು, ಬೈಕ್‌ ಸವಾರ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರಿಗೆ ಸಾಮಾನ್ಯ ಗಾಯಗಳಾಗಿದ್ದು, ಗುಣಮುಖರಾಗಿದ್ದಾರೆ. ಅಪಘಾತದ ದೃಶ್ಯ ವಾಣಿಜ್ಯ ಮಳಿಗೆಯೊಂದರಲ್ಲಿ ಇರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ವೈರಲ್‌ ಆಗಿದೆ. ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಫಘಾತ ಸಂಭವಿಸಿದ ನಂತರ ನಗರಸಭೆ ಅಧಿಕಾರಿಗಳು ಎಚ್ಚರಗೊಂಡಿದ್ದು ರಸ್ತೆ ವಿಭಜಕಗಳ ಮಧ್ಯೆ ಬೆಳೆದ ಸಸಿಗಳನ್ನು ಕತ್ತರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಏನಿದು ಘಟನೆ?
ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ರಾಮಮಂದಿರ ಮುಂಭಾಗದಿಂದ ಬಂದ ಸವಾರ್ ಏಕಾಏಕಿ ಯು ಟರ್ನ್‌ ಪಡೆದಿದ್ದಾರೆ. ಇದರಿಂದಾಗಿ ದ್ವಿಚಕ್ರವಾಹನವು ಎದುರಿನಿಂದ ವೇಗವಾಗಿ ಬರುತ್ತಿದ್ದ ಮಂಗಳೂರು ನೋಂದಣಿ ಸಂಖ್ಯೆ ಇರುವ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಹೊರಟಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ನಾಲ್ವರು ವಿದ್ಯಾರ್ಥಿನಿಯರು ಪಕ್ಕದಲ್ಲಿ ಪಾದಚಾರಿ ರಸ್ತೆ ಇದ್ದರೂ ರಸ್ತೆ ಮೇಲೆ ನಡೆದುಕೊಂಡು ಹೊರಟಿದ್ದರು. ಕಾರು ಡಿಕ್ಕಿಯ ರಭಸಕ್ಕೆ ಒಬ್ಬ ವಿದ್ಯಾರ್ಥಿನಿ ಮುಂಭಾಗದಲ್ಲಿ 15 ಅಡಿ ಹಾರಿ ಬಿದ್ದು ಗಾಯಗೊಂಡರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com