ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ, 222 ವಾಹನ ಸವಾರರ ಚಾಲನಾ ಪರವಾನಗಿ ಅಮಾನತಿಗೆ ಶಿಫಾರಸು

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು  ಮಾಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು  ಮಾಡಿದ್ದಾರೆ. 

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಂಚಾರ ಉಪ ವಿಭಾಗದ ಅಧೀನ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷತದಿಂದ ಚಾಲನೆ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವ ಸವಾರರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. 

ಜುಲೈ 13 ರಿಂದ 26ರವರೆಗೂ ಅತಿ ವೇಗದ, ನಿರ್ಲಕ್ಷ್ಯದ ಚಾಲನೆಗಾಗಿ 113 ಸೇರಿದಂತೆ ಒಟ್ಟಾರೇ 222 ಚಾಲಕರ ಚಾಲನಾ ಪರವಾನಗಿ ಅಮಾನತುಗೊಳಿಸುವಂತೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com