ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಖಾಸಗಿ ಕ್ಷಣಗಳ ವಿಡಿಯೋ ವೈರಲ್; ದಾವಣಗೆರೆಯ ಇಬ್ಬರು ಪದವಿ ವಿದ್ಯಾರ್ಥಿಗಳು ಆತ್ಮಹತ್ಯೆ!

ಖಾಸಗಿ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ನೊಂದು ದಾವಣಗೆರೆಯ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
Published on

ದಾವಣಗೆರೆ: ಖಾಸಗಿ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ನೊಂದು ದಾವಣಗೆರೆಯ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಕಾಲೇಜು ವಿದ್ಯಾರ್ಥಿಗಳಾದ ಯುವ ಜೋಡಿ ಪರಸ್ಪರ ಪ್ರೀತಿಸುತ್ತಿದ್ದು, ಕೆಲ ದಿನಗಳ ಹಿಂದೆ ಕಾಲೇಜಿನ ಮಹಡಿ ಒಂದರಲ್ಲಿ ಖಾಸಗಿ ಕ್ಷಣಗಳನ್ನು ಕಳೆದಿದ್ದರು. ಈ ಘಟನೆಯನ್ನು ಅಪರಿಚಿತ ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ.

ಈ ದೃಶ್ಯಗಳು ವೈರಲ್ ಆಗುತ್ತಿದ್ದಂತೆ ಹುಡುಗ ಮತ್ತು ಹುಡುಗಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಶುಕ್ರವಾರ ರಾತ್ರಿ ಬಾಲಕ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಈಮಧ್ಯೆ, ಮೃತ ವಿದ್ಯಾರ್ಥಿಗಳ ಪೋಷಕರು ಮಕ್ಕಳ ಸಾವಿನ ಬಗ್ಗೆ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com