ಸಂಗ್ರಹ ಚಿತ್ರ
ರಾಜ್ಯ
ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಹಣ ವಸೂಲಿ: ಆನ್‌ಲೈನ್ ನೋಂದಣಿ ಕೇಂದ್ರ ಸೀಜ್
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುತ್ತಿದ್ದ ಗ್ರಾಮ ಒನ್ ಕೇಂದ್ರವನ್ನು ಶನಿವಾರ ಅಧಿಕಾರಿಗಳು ಸೀಜ್ ಮಾಡಿದರು.
ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುತ್ತಿದ್ದ ಗ್ರಾಮ ಒನ್ ಕೇಂದ್ರವನ್ನು ಶನಿವಾರ ಅಧಿಕಾರಿಗಳು ಸೀಜ್ ಮಾಡಿದರು.
ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ನೋಂದಣಿಗಾಗಿ ಹಣ ಸಂಗ್ರಹಿಸುತ್ತಿದ್ದ ಆನ್‌ಲೈನ್ ನೋಂದಣಿ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಅಜೀತ್ ಎಂಬುವವರು ನಡೆಸುತ್ತಿದ್ದ ಮಹಾಕಾಳಿ ಇಂಟರ್‌ನೆಟ್ ಸೆಂಟರ್'ನಲ್ಲಿ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿಗಾಗಿ ಹಣ ಸಂಗ್ರಹ ಮಾಡಲಾಗುತ್ತಿತ್ತು.
ಪ್ರತಿ ನೋಂದಣಿಗೆ 100 ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಾರೂಗೇರಿ ಪೊಲೀಸರು ಕೇಂದ್ರದ ಮೇಲೆ ದಾಳಿ ನಡೆಸಿ, ಕೇಂದ್ರವನ್ನು ಸೀಜ್ ಮಾಡಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ