ಅಂಬೋಲಿ ಅರಣ್ಯದಲ್ಲಿ ಮಹಾರಾಷ್ಟ್ರ ಎಟಿಎಸ್: ಉಗ್ರರ ಪ್ರಾಯೋಗಿಕ ಸ್ಫೋಟ ಸ್ಥಳ ಪರಿಶೀಲನೆ

ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬೆಳಗಾವಿ ಜಿಲ್ಲೆಯ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಅಂಬೋಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಪ್ರಾಯೋಗಿಕ ಬಾಂಬ್ ಸ್ಫೋಟದ ಕುರಿತು ಶಂಕಿತ ಭಯೋತ್ಪಾದಕರನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದು, ಉಗ್ರರ ಪಿತೂರಿಯ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬೆಳಗಾವಿ ಜಿಲ್ಲೆಯ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಅಂಬೋಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಪ್ರಾಯೋಗಿಕ ಬಾಂಬ್ ಸ್ಫೋಟದ ಕುರಿತು ಶಂಕಿತ ಭಯೋತ್ಪಾದಕರನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದು, ಉಗ್ರರ ಪಿತೂರಿಯ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

ಪುಣೆಯ ಎಟಿಎಸ್ ಅಧಿಕಾರಿಗಳು ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮೀರ್ ಅಬ್ದುಲ್ ಹಮೀದ್ ಖಾನ್ ಮತ್ತು ಮೊಹಮ್ಮದ್ ಯೂನಿಸ್ ಮೊಹಮ್ಮದ್ ಯಾಕೂಬ್ ಸಾಕಿ ಎಂಬ ಶಂಕಿತ ಉಗ್ರರನ್ನು ಬಂಧಿಸಿದ್ದು, ಎಟಿಎಸ್ ತಂಡ ನಿಪ್ಪಾಣಿ ಮತ್ತು ಬೆಳಗಾವಿಯ ಸಂಕೇಶ್ವರಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ.

ಪುಣೆಯ ಕೊತ್ರುಡ್ ಪ್ರದೇಶದ ಪೊಲೀಸರು ಶಂಕಿತ ಉಗ್ರರನ್ನು ಬೈಕ್ ಕಳ್ಳರೆಂದು ಭಾವಿಸಿ ಬಂಧಿಸಿದ್ದರು. ಆದರೆ ವಿಚಾರಣೆ ವೇಳೆ, ಈ ಶಂಕಿತರು ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿತ್ತು. ನಂತರ ಅವರನ್ನು ಮಹಾರಾಷ್ಟ್ರ ಎಟಿಎಸ್ ವಶಕ್ಕೆ ತೆಗೆದುಕೊಂಡಿದೆ. ಅಂಬೋಲಿ ಗ್ರಾಮದ ದಟ್ಟ ಅರಣ್ಯದಲ್ಲಿ ಪ್ರಾಯೋಗಿಕ ಸ್ಫೋಟ ನಡೆಸಿರುವುದಾಗಿ ಅವರು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಶಂಕಿತ ಆರೋಪಿಗಳು ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಕೊಲ್ಲಾಪುರದಿಂದ ಅಂಬೋಲಿಗೆ ಪ್ರಯಾಣಿಸಿದ್ದರಿಂದ ಪೊಲೀಸರು ಜುಲೈ 27 ರಂದು ಮಾರ್ಗದ ವಿವರಗಳನ್ನು ಪರಿಶೀಲಿಸಿದರು. ಆದರೆ ಎಟಿಎಸ್ ತಂಡ ಬೆಳಗಾವಿಗೆ ಭೇಟಿ ನೀಡುತ್ತಿರುವ ಬಗ್ಗೆ ಮಹಾರಾಷ್ಟ್ರ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎಂದು ಬೆಳಗಾವಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ ಮತ್ತು ಎಟಿಎಸ್ ತಂಡ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿಲ್ಲ ಎಂದೂ ತಿಳಿಸಲಾಗಿದೆ.

ಇದರ ನಡುವೆಯೇ ಶಂಕಿತರನ್ನು ಬಂಧಿಸಿ ಇಬ್ಬರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರ ಎಟಿಎಸ್ ಗುರುವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ತಿಳಿಸಿದ್ದು, ಇಬ್ಬರೂ ಆರೋಪಿಗಳನ್ನು ಯುಎಪಿಎ ಆರೋಪದಡಿ ದಾಖಲಿಸಲಾಗಿದೆ ಎಂದು ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com