ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಗ್ಯಾರಂಟಿ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ ಪ್ರಕಟ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ  ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿಯನ್ನು ವಿತರಿಸಲು ಶನಿವಾರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ  ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿಯನ್ನು ವಿತರಿಸಲು ಶನಿವಾರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಕೌಶಲಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳು ಎರಡೂ ಯೋಜನೆಗಳ ಅನುಷ್ಠಾನಕ್ಕೆ ಪ್ರತ್ಯೇಕ ಆದೇಶ ಹೊರಡಿಸಿವೆ.ಯುವನಿಧಿ ಯೋಜನೆಯಡಿ ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು 2023ರಲ್ಲಿ ಪೂರೈಸುವವರಿಗೆ ಕ್ರಮವಾಗಿ ತಿಂಗಳಿಗೆ ರೂ.3,000 ಹಾಗೂ ರೂ. 1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. 

ಯುವ ನಿಧಿ ಮಾರ್ಗಸೂಚಿಗಳು: 

*. ಪದವಿ ಅಥವಾ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಯಾವುದೇ ಉದ್ಯೋಗ ದೊರಕದ ಕನ್ನಡಿಗರು ಮಾತ್ರ ಯುವ ನಿಧಿ ಯೋಜನೆಗೆ ಅರ್ಹರು.

• ಎರಡು ವರ್ಷಗಳವರೆಗೆ ಯೋಜನೆಯಡಿ  ನಿರುದ್ಯೋಗ ಭತ್ಯೆ ಪಡೆಯಬಹುದು. 2 ವರ್ಷದೊಳಗೆ ಉದ್ಯೋಗ ಸಿಕ್ಕರೆ ಭತ್ಯೆ ಪಾವತಿ ಸ್ಥಗಿತ

• ಉದ್ಯೋಗ ದೊರಕಿದ ಬಗ್ಗೆ ತಪ್ಪು ಮಾಹಿತಿ ನೀಡಿದರೆ ಅಥವಾ ಉದ್ಯೋಗ ಸಿಕ್ಕಿದೆ ಎಂದು ಘೋಷಣೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ.

• ನೇರ ನಗದು ಪಾವತಿ ವ್ಯವಸ್ಥೆ ಮೂಲಕ ನಿರುದ್ಯೋಗ ಭತ್ಯೆ ಪಾವತಿ ಮಾಡಲಾಗುತ್ತದೆ.  ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಯಾರಿಗೆ ಭತ್ಯೆ ಇಲ್ಲ?

• ಪದವಿ ಅಥವಾ ಡಿಪ್ಲೋಮಾ ಬಳಿಕ ಉನ್ನತ ವ್ಯಾಸಂಗ ಮುಂದುವರಿಸಿದರೆ ಭತ್ಯೆ ಇಲ್ಲ

• ಅಪ್ರೆಂಟಿಸ್ ವೇತನ ಪಡೆಯುತ್ತಿರುವವರಿಗೆ ಭತ್ಯೆ ಇಲ್ಲ

• ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಭತ್ಯೆ ಇಲ್ಲ

• ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕ್​​ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುತ್ತಿರುವವಿಗೂ ಯುವ ನಿಧಿ ಯೋಜನೆಯಡಿ ಭತ್ಯೆ ಸಿಗುವುದಿಲ್ಲ.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳು: 

• ಅಂತ್ಯೋದಯ ಪಡಿತರ ಚೀಟಿ​ ಹೊಂದಿರುವ ಪ್ರತಿ ಕುಟುಂಬಕ್ಕೆ ಕೇಂದ್ರ ಸರ್ಕಾರ ತಿಂಗಳಿಗೆ 35 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ನೀಡುತ್ತಿದೆ. ಇನ್ನೂ ಮುಂದೆ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಮೂವರು ಸದಸ್ಯರಿದ್ದರೆ ತಿಂಗಳಿಗೆ 35 ಕೆಜಿ ಆಹಾರ ಧಾನ್ಯ ಉಚಿತವಾಗಿ ದೊರೆಯಲಿದೆ. ಈ ಕುಟುಂಬಗಳಲ್ಲಿ ನಾಲ್ಕು ಜನರಿದ್ದರೆ ತಲಾ 10 ಕೆಜಿ ಅಕ್ಕಿಯಂತೆ ಒಟ್ಟು 40 ಕೆಜಿ, ಐವರು ಇದ್ದರೆ 50 ಕೆಜಿ, ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೆ 10 ಕೆಜಿಯಂತೆ ಉಚಿತ ಆಹಾರ ಧಾನ್ಯ ಸಿಗಲಿದೆ. 

* ಬಿಪಿಎಲ್‌ ಕಾರ್ಡ್​ ಹೊಂದಿರುವ ಕುಟುಂಬಗಳಲ್ಲಿ ಪ್ರತಿ ಸದಸ್ಯರಿಗೆ 10 ಕೆ.ಜಿ.ಯಂತೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ.

* ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರವು ಈಗಾಗಲೇ ಅಂತ್ಯೋದಯ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ತಲಾ 35 ಕೆ.ಜಿ. ಹಾಗೂ ಬಿಪಿಎಲ್‌ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ ಐದು ಕೆ.ಜಿ. ಆಹಾರ ಧಾನ್ಯವನ್ನು ಒದಗಿಸುತ್ತಿದೆ. ಹೆಚ್ಚುವರಿ ಆಹಾರ ಧಾನ್ಯದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com