ಕಾಂಗ್ರೆಸ್‌ನ ಚುನಾವಣಾ ಗ್ಯಾರಂಟಿ ಅನುಷ್ಠಾನದಲ್ಲಿ ಸ್ಪಷ್ಟತೆ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಕರ್ನಾಟಕದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರತರುವಂತೆ ಮತ್ತು ಪಕ್ಷದ ಐದು ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸಲು ಆದಾಯದ ಮೂಲವನ್ನು ಬಹಿರಂಗಪಡಿಸುವಂತೆ ಬಿಜೆಪಿ ಶನಿವಾರ ಕಾಂಗ್ರೆಸ್ ಸರ್ಕಾರವನ್ನು ಕೇಳಿದೆ.
ನಳಿನ್ ಕುಮಾರ್ ಕಟೀಲು
ನಳಿನ್ ಕುಮಾರ್ ಕಟೀಲು
Updated on

ಮಂಗಳೂರು: ಕರ್ನಾಟಕದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರತರುವಂತೆ ಮತ್ತು ಪಕ್ಷದ ಐದು ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸಲು ಆದಾಯದ ಮೂಲವನ್ನು ಬಹಿರಂಗಪಡಿಸುವಂತೆ ಬಿಜೆಪಿ ಶನಿವಾರ ಕಾಂಗ್ರೆಸ್ ಸರ್ಕಾರವನ್ನು ಕೇಳಿದೆ.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಗ್ಯಾರಂಟಿಗಳನ್ನು ಜಾರಿಗೊಳಿಸುವ ಸಂಪೂರ್ಣ ಪ್ರಕ್ರಿಯೆಯಲ್ಲಿಯೇ ಸ್ಪಷ್ಟತೆಯ ಕೊರತೆಯಿದೆ. ಯೋಜನೆಗಳ ಅನುಷ್ಠಾನದ ವಿವರಗಳನ್ನು ಜನರಿಗೆ ಸ್ಪಷ್ಟವಾಗಿ ತಿಳಿಸಬೇಕು ಎಂದು ದೂರಿದರು.

ರಾಜ್ಯವು ಜಾರಿಗೊಳಿಸಿರುವ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಉಚಿತ ಅಕ್ಕಿ ಯೋಜನೆಯಲ್ಲಿ, ಕೇಂದ್ರದಿಂದ ಈಗಾಗಲೇ ನೀಡುತ್ತಿರುವ 5 ಕೆಜಿ ಅಕ್ಕಿಯ ಜೊತೆಗೆ ಇದು ಹೆಚ್ಚುವರಿ 10 ಕೆಜಿ ಅಕ್ಕಿ ನೀಡಲಾಗುತ್ತದೆಯೇ ಎಂದು ಕಟೀಲ್ ಪ್ರಶ್ನಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಭರವಸೆಗಳನ್ನು ಜಾರಿಗೊಳಿಸಿದರೆ, ರಾಜ್ಯ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲಿದೆ. ರಾಜ್ಯ ಸರ್ಕಾರ ಗ್ಯಾರಂಟಿಗಳ ಅನುಷ್ಠಾನಕ್ಕೆ ಆದಾಯದ ಮೂಲವನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಯಾವುದೇ ಸ್ಪಷ್ಟತೆ ಇಲ್ಲದೆ ಚುನಾವಣೆಗೆ ಮುನ್ನ ಯೋಜನೆಗಳನ್ನು ಘೋಷಿಸಿತ್ತು ಮತ್ತು ಈಗ ಯಾವುದೇ ಸ್ಪಷ್ಟವಾದ ವಿವರಗಳಿಲ್ಲದೆ ಅನುಷ್ಠಾನಗೊಳಿಸುತ್ತಿದೆ ಎಂದು ಆರೋಪಿಸಿದರು.

ಆಡಳಿತಾರೂಢ ಕಾಂಗ್ರೆಸ್‌ನ ಐದು ಚುನಾವಣಾ ಭರವಸೆಗಳನ್ನು ಯಾವುದೇ ಜಾತಿ ಅಥವಾ ಧರ್ಮದ ತಾರತಮ್ಯವಿಲ್ಲದೆ ಜಾರಿಗೆ ತರಲು ತಮ್ಮ ಸಂಪುಟ ನಿರ್ಧರಿಸಿದೆ ಮತ್ತು ಈ ಹಣಕಾಸು ವರ್ಷದೊಳಗೆ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಮಯ ನಿಗದಿಪಡಿಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com