ಆಕಸ್ಮಿಕವಾಗಿ ಕೆರೆಯೊಳಗೆ ಬಿದ್ದಿದ್ದ ಕಾಡಾನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ
ಆಕಸ್ಮಿಕವಾಗಿ ಕೆರೆಯೊಳಗೆ ಬಿದ್ದಿದ್ದ ಕಾಡಾನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಕೊಡಗು: ನೀರು ಕುಡಿಯಲು ಬಂದು ಕೆರೆಗೆ ಬಿದ್ದಿದ್ದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಗ್ರಾಮದಲ್ಲಿ ಶನಿವಾರ ಇಲ್ಲಿನ ಕಾಫಿ ತೋಟದಲ್ಲಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.
Published on

ವಿರಾಜಪೇಟೆ: ತಾಲೂಕಿನ ಕರಡ ಗ್ರಾಮದಲ್ಲಿ ಶನಿವಾರ ಇಲ್ಲಿನ ಕಾಫಿ ತೋಟದಲ್ಲಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

ಕರಡ ಗ್ರಾಮದ ನಡಿಕೇರಿಯಂಡ ಐಯಣ್ಣ ಎಂಬುವವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕಾಫಿ ಗಿಡಗಳಿಗೆ ನೀರುಣಿಸಲು ಕೆರೆ ತೋಡಲಾಗಿತ್ತು. ಈ ವೇಳೆ ಕಾಡಾನೆಗಳ ಗುಂಪು ಆಹಾರ ಅರಸಿ ತೋಟಕ್ಕೆ ಬಂದಿದ್ದು, ಅದರಲ್ಲಿ ಒಂದು ಕಾಡಾನೆ ಕೆರೆಗೆ ಬಿದ್ದಿತ್ತು.

25 ವರ್ಷದ ಆನೆ ಬಾಯಾರಿಕೆ ನೀಗಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಆಕಸ್ಮಿಕವಾಗಿ ಎಸ್ಟೇಟ್‌ನಲ್ಲಿದ್ದ ಕೆರೆಗೆ ಬಿದ್ದಿದೆ. ಆದರೆ, ಅಲ್ಲಿಂದ ಹೊರ ಬರಲು ಸಾಧ್ಯವಾಗಿಲ್ಲ. ಇದನ್ನು ಗಮನಿಸಿದ ಎಸ್ಟೇಟ್‌ನ ಕಾರ್ಮಿಕರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ದೌಡಾಯಿಸಿ ಅರಣ್ಯಾಧಿಕಾರಿಗಳು, ಆನೆ ಹೊರ ಬರಲು ಮಣ್ಣು ತೆಗೆಯುವ ಯಂತ್ರವನ್ನು ಬಳಸಿ ಕೆರೆಯಿಂದ ಮಾರ್ಗ ನಿರ್ಮಿಸಿದ್ದಾರೆ. ಈ ವೇಳೆ ಕೆರೆಯಿಂದ ಹೊರಬಂದ ಆನೆ, ಪಕ್ಕದಲ್ಲಿಯೇ ನಿಲ್ಲಿಸಿದ್ದ ಅರಣ್ಯಾಧಿಕಾರಿಗಳ ಜೀಪಿನತ್ತ ನುಗ್ಗಿತು. 

ಅರಣ್ಯ ಇಲಾಖೆಯ ಸುಮಾರು 30 ಸಿಬ್ಬಂದಿ ಕಾಡಾನೆ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಡಿಸಿಎಫ್ ಶರಣ ಬಸಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com