ಪಠ್ಯಪುಸ್ತಕಗಳ ಪರಿಷ್ಕರಣೆಗೆ ಶೀಘ್ರದಲ್ಲೇ ಸಮಿತಿ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪಠ್ಯಪುಸ್ತಕ ಪರಿಷ್ಕರಣೆ ಕೈಗೊಳ್ಳಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದರು.
ಸಚಿವ ಮಧುಬಂಗಾರಪ್ಪ
ಸಚಿವ ಮಧುಬಂಗಾರಪ್ಪ
Updated on

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಕೈಗೊಳ್ಳಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದರು.

ಕೆಲ ದಿನಗಳ ಹಿಂದಷ್ಟೇ ಸಾಹಿತಿಗಳು ಮತ್ತು ಹೋರಾಟಗಾರರ ಗುಂಪೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಪಠ್ಯಪುಸ್ತಕ ಪರಿಷ್ಕರಣೆಯನ್ನು ಕೈಬಿಡುವಂತೆ ಮನವಿ ಮಾಡಿಕೊಂಡಿದ್ದರು.

ಇದರ ಬೆನ್ನಲ್ಲೇ ಶುಕ್ರವಾರ ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರನ್ನು ಭೇಟಿ ಮಾಡಿದ ಶಿಕ್ಷಣ ಸಚಿವರು, ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಚರ್ಚೆ ನಡೆಸಿದರು.

ಈ ಕುರಿತು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ ಅವರು, ಈ ಬಾರಿ ಶೈಕ್ಷಣಿಕ ವರ್ಷಕ್ಕೆ ಪರಿಷ್ಕೃತ ಪಠ್ಯಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಇದು ಸುಗಮ ಪ್ರಕ್ರಿಯೆ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ, ಈಗಾಗಲೇ ಪಠ್ಯಪುಸ್ತಕಗಳನ್ನು ವಿತರಿಸಿರುವುದರಿಂದ ಕಾನೂನು ರೀತಿಯಲ್ಲಿ ಸಮಸ್ಯೆ ಬಗೆಹರಿಸಬೇಕು. ಪಠ್ಯಪುಸ್ತಕ ಪರಿಷ್ಕರಣೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗದ ರೀತಿಯಲ್ಲಿ ನಡೆಯುವಂತೆ ನಿನ್ನೆ ಬರಗೂರು ರಾಮಚಂದ್ರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ್ದೆ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಪರಿಷ್ಕರಣೆ ನಡೆಯಲಿದೆ ಎಂದು ಹೇಳಿದರು.

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ನನ್ನ ಸ್ವಾರ್ಥ ಏನೂ ಇಲ್ಲ. ಮಕ್ಕಳ ಹಿತ, ಭವಿಷ್ಯ ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ಕೆ ಕೈ ಹಾಕಿದ್ದೇವೆ’ ಎಂದು ತಿಳಿಸಿದರು.

ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಎಲ್ಲಾ ವಾತಾವರಣ ಚೆನ್ನಾಗಿದೆ. ಸ್ವಲ್ಪ ಆಡಳಿತವನ್ನು ಒಂದು ಹಂತಕ್ಕೆ ತರಬೇಕಿದೆ. ಉತ್ತಮ ಅಧಿಕಾರಿಗಳು, ಶಿಕ್ಷಕರು ಹಾಗೂ ಮಕ್ಕಳಿದ್ದಾರೆ, ಪೋಷಕರು ಇದ್ದಾರೆ ಎಲ್ಲವನ್ನು ಸರಿಮಾಡೋಣ ಎಂದರು.

2022 ರಲ್ಲಿ ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕ ಪರಿಷ್ಕರಣೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಕೆಲ ಹೋರಾಟಗಾರರು ಮತ್ತು ಲೇಖಕರು ಪಠ್ಯಪುಸ್ತಕ ಪರಿಷ್ಕರಣೆ ಮೂಲಕ ಶಿಕ್ಷಣ ವ್ಯವಸ್ಥೆಯನ್ನು 'ಕೇಸರಿಕರಣ' ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದರು.

ವಿವಾದ ಭುಗಿಲೇಳುತ್ತಿದ್ದಂತೆಯೇ ಪರಿಷ್ಕರಣೆ ಸಮಿತಿಯ ಮುಖ್ಯಸ್ಥರಾಗಿ ಬರಗೂರು ರಾಮಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿತ್ತುಯ

ಈ ಎಲ್ಲಾ ಬೆಳವಣಿಗೆ ಬಳಿಕ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ತಂದ ಬದಲಾವಣೆಗಳನ್ನು ತೆಗೆದುಹಾಕುವುದಾಗಿ ಭರವಸೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com