ಎಂಬಿ ಪಾಟೀಲ್, ಜಗ್ಗೇಶ್ ಸಾಂದರ್ಭಿಕ ಚಿತ್ರ
ಎಂಬಿ ಪಾಟೀಲ್, ಜಗ್ಗೇಶ್ ಸಾಂದರ್ಭಿಕ ಚಿತ್ರ

ಸೂಲಿಬೆಲೆ ಜೈಲಿಗೆ ಕಳುಹಿಸುವ ವಾರ್ನಿಂಗ್: ಕಾನೂನು ನಿಮ್ಮ ಜೇಬಲ್ಲಿ ಇದೆಯ? ಜಗ್ಗೇಶ್ ತಿರುಗೇಟು

ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರೆಸಿದರೆ ಚಕ್ರವರ್ತಿ ಸೂಲಿಬೆಲೆಯನ್ನು ಜೈಲಿಗೆ ಕಳುಹಿಸುವ ವಾರ್ನಿಂಗ್ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ರಾಜ್ಯಸಭಾ ಸದಸ್ಯ ಜಗ್ಗೇಶ್ ಸೋಮವಾರ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರೆಸಿದರೆ ಚಕ್ರವರ್ತಿ ಸೂಲಿಬೆಲೆಯನ್ನು ಜೈಲಿಗೆ ಕಳುಹಿಸುವ ವಾರ್ನಿಂಗ್ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ರಾಜ್ಯಸಭಾ ಸದಸ್ಯ ಜಗ್ಗೇಶ್ ಸೋಮವಾರ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ಸೂಲಿಬೆಲೆರವರು ಯಾವ ಅಧಿಕಾರದ ಹಿಂದೆ ಹೋಗದೆ ಸಾಂಸ್ಕೃತಿಕ, ತತ್ವ, ವಿಚಾರ, ಕೆರೆಕಟ್ಟೆ ಪುನರ್ಜೀವನ, ಪ್ರವಚನದಂತಹ ಸಾತ್ವಿಕ ಚಿಂತಕ. ಅವರನ್ನು ಜೈಲಿಗೆ ಹಾಕುವೆ ಎಂದರೆ , ಅಲ್ಲಿಗೆ ಗೆದ್ದು ತಿಂಗಳಿಗೆ ಈ ಮಾತು ಸನ್ಮಾನ್ಯ ಎಂ.ಬಿ. ಪಾಟೀಲ್ ಬಾಯಲ್ಲಿ! ಮಾನ್ಯರೆ ಕಾನೂನು ನಿಮ್ಮ ಜೀಬಲ್ಲಿ ಇದೆಯೇ? ಕೋಟಿ ಸಂಖ್ಯೆಯ ಭುಜ ಕೊಡುವ ಶಕ್ತಿ ಜೀವಂತಿವಿದೆ ಅವರ ಬೆನ್ನಿಗೆ ಎಂದಿದ್ದಾರೆ. ಜಗ್ಗೇಶ್ ಅವರ ಈ ಟ್ವೀಟ್ ಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿವೆ.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಸೂಲಿಬೆಲೆ ಟೀಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದಂಗೆ ಈಗ ನಾಟಕ ಮಾಡಿದ್ರೆ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್ ಎಂದಿದ್ದರು. ಈ ಹೇಳಿಕೆ ಬಿಜೆಪಿ ನಾಯಕರಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.

Related Stories

No stories found.

Advertisement

X
Kannada Prabha
www.kannadaprabha.com