ರಾಮಲಿಂಗಾರೆಡ್ಡಿ
ರಾಜ್ಯ
ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ
ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು: ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸಾಮಾನ್ಯವಾಗಿ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಿಗೆ ಪ್ರತ್ಯೇಕ ವ್ಯಕ್ತಿಗಳನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಒಬ್ಬರಿಗೆ ನಾಲ್ಕು ನಿಗಮದ ಸಾರಥ್ಯ ನೀಡಲಾಗಿದೆ.
ಈ ಮಧ್ಯೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಪ್ರಾಣಿಗಳನ್ನು ಕೊಲ್ಲಬಾರದು. ನಾನು ಪ್ರಾಣಿಹತ್ಯೆ ನಿಷೇಧದ ಪರ. ಆದರೆ ಸಂಪುಟದಲ್ಲಿ ಈ ಬಗ್ಗೆ ಏನೂ ಹೇಳುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ