ಸ್ಮಾರ್ಟ್ ಫೋನ್'ನಲ್ಲಿ ಪ್ರವಾಸಿ ತಾಣಗಳ ಹುಡುಕಿ ಮನೆ ಬಿಟ್ಟ 9ನೇ ತರಗತಿ ಬಾಲಕ!
ಬೆಂಗಳೂರು: 9ನೇ ತರಗತಿ ಬಾಲಕನೊಬ್ಬ ಅಮ್ಮನ ಮೊಬೈಲ್ ನಲ್ಲಿ ಪ್ರವಾಸಿ ತಾಣಗಳನ್ನು ಹುಡುಕಿ ಮನೆಯಿಂದ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೇ.29 ರಂದು ಹೇರ್ ಕಟ್ ಮಾಡಿಸಿಕೊಂಡು ಬರುತ್ತೇನೆಂದು ಹೊರಗೆ ಬಂದಿರುವ ಬಾಲಕ ಅಂದಿನಿಂದ ನಾಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ. ಈ ಸಂಬಂಧ ಪೋಷಕರು ಆರ್'ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೊರಗೆ ಹೋಗುವುದಕ್ಕೂ ಮುನ್ನ ತಾಯಿಯ ಸ್ಮಾರ್ಟ್ ಫೋನ್ ನಲ್ಲಿ ಪ್ರವಾಸಿ ತಾಣಗಳ ಕುರಿತು ಹುಡುಕಾಟ ನಡೆಸಿದ್ದಾನೆ. ಮೈಸೂರಿನ ಕೆಲ ಭಾಗಗಳ ಬಗ್ಗೆ ಬಾಲಕ ಹುಡುಕಾಟ ನಡೆಸಿದ್ದಾನೆ. ಬಳಿಕ ಮನೆಯಲ್ಲಿದ್ದ ಬಟ್ಟೆಗಳನ್ನ ತೆಗೆದುಕೊಂಡು ಹೋಗಿದ್ದಾನೆ. ಆದಿತ್ಯಾ ಮನೆ ಬಿಟ್ಟು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇತ್ತ ಮಗ ಮಿಸ್ಸಿಂಗ್ ಆದ ಬೆನ್ನಲ್ಲೆ ಪೋಷಕರು ಜ್ಯೋತಿಷ್ಯದ ಮೊರೆ ಹೋಗಿದ್ದಾರೆ. ಈ ವೇಳೆ ಜ್ಯೋತೀಷಿ ದಕ್ಷಿಣ ಕನ್ನಡ ಭಾಗದಲ್ಲಿದ್ದಾನೆಂದು ಹೇಳಿದ್ದಾರೆ. ಅಂತೆಯೇ ಜ್ಯೋತೀಷಿ ಮಾತು ಕೇಳಿ ಪೋಷಕರು ಕರಾವಳಿ ಭಾಗಕ್ಕೆ ಮಗನನ್ನ ಹುಡುಕಲು ಹೊರಟಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಪೋಷಕರು ಆದಿತ್ಯನಿಗಾಗಿ ಹುಡುಕಾಟ ನಡೆಸಿದ್ದಾರೆ.
ಬಾಲಕ ವಸಂತಪ್ಪ ಬಡಾವಣೆ ನಿವಾಸಿಯಾಗಿದ್ದು, ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿದ್ದಾನೆಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ