ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ, ಮೂವರ ದಾರುಣ ಸಾವು

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್​​  ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ
ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್​​  ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಮೃತರನ್ನು ಕನಕಮಣಿ (72), ಆಕಾಶ್ (17) ಎಂದು ಗುರುತಿಸಲಾಗಿದ್ದು, ಆ್ಯಂಬುಲೆನ್ಸ್ ಚಾಲಕ (45) ಗುರುತು ಇನ್ನೂ ಬಹಿರಂಗವಾಗಿಲ್ಲ.

ಗಾಯಗೊಂಡಿರುವ ಜ್ಞಾನಶೇಖರ (51) ಮತ್ತು ಮೌಳಿ ರಾಜನ್ (40) ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಎಸ್ಪಿ ಕೆ.ಪರಶುರಾಮ್ ತಿಳಿಸಿದ್ದಾರೆ.

ಅಹಮದಾಬಾದ್‌ನಿಂದ ತಮಿಳುನಾಡಿಗೆ ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ರಾಜಸ್ಥಾನ ನೋಂದಾಯಿತ ಆಂಬ್ಯುಲೆನ್ಸ್ ರಸ್ತೆಯ ಫುಟ್‌ಪಾತ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಅತಿವೇಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.

ನಿದ್ರೆಯ ಕೊರತೆ ಹಾಗೂ ಅತಿಯಾದ ವೇಗದಿಂದ ಅಪಘಾತ ಸಂಭವಿಸಿರಬಹುದು ಎಂದೂ ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

ಆಂಬ್ಯುಲೆನ್ಸ್ ಚಾಲಕನನ್ನು ಹೊರತುಪಡಿಸಿ ಎಲ್ಲರೂ ತಮಿಳುನಾಡಿನ ತಿರುನಲ್ವೇಲಿಯವರು ಅಹಮದಾಬಾದ್‌ನಲ್ಲಿ ನೆಲೆಸಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com