ಭೂಸುಧಾರಣೆ, ಎಪಿಎಂಸಿ ಕಾಯ್ದೆಗಳ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈಗಿರುವ ಕಾಯ್ದೆಗಳಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಗಳ ಪರಿಶೀಲಿಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈಗಿರುವ ಕಾಯ್ದೆಗಳಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಗಳ ಪರಿಶೀಲಿಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ನಿನ್ನೆಯಷ್ಟೇ ರೈತ ಮುಖಂಡರ ಗುಂಪು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಈ ವೇಳೆ ಮುಖ್ಯಮಂತ್ರಿಗಳು ಕಾಯ್ದೆ ತಿದ್ದುಪಡಿಗಳ ಪರಿಶೀಲಿಸುವ ಭರವಸೆ ನೀಡಿದರು ಎಂದು ತಿಳಿದುಬಂದಿದೆ.

ಇದೇ ವೇಳೆ ಕೇಂದ್ರ ಸರಕಾರವು ಕಾರ್ಪೊರೇಟ್ ಕೃಷಿಯನ್ನು ಪರಿಚಯಿಸುವುದರಿಂದ ಶೇ.85 ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗಲಿದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೀತಿಗಳ ಬಗ್ಗೆ ವಿವರವಾಗಿ ಚರ್ಚಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾಗಿರುವ ನಿಯಮಾವಳಿಗಳ ಬಗ್ಗೆಯೂ ಚರ್ಚಿಸಲಾಗುವುದು, ರೈತ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com